ಆಯನೂರು TO ಪಂಜಾಬ್‌ ಹೊರಟಿದ್ದ ಶುಂಠಿ ಲಾರಿ ನಾಪತ್ತೆ, ವಾಟ್ಸಪ್‌ ಮೆಸೇಜ್‌ ಕಂಡು ವರ್ತಕನಿಗೆ ಬಿಗ್‌ ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | 23 NOVEMBER 2023

AYANUR : ಪಂಜಾಬ್‌ಗೆ 180 ಕ್ವಿಂಟಾಲ್‌ ಶುಂಠಿ ತುಂಬಿಕೊಂಡು ಹೊರಟ ಲಾರಿ ನಿಗದಿತ ಸ್ಥಳ ತಲುಪದೆ ನಾಪತ್ತೆಯಾಗಿದೆ. ಲಾರಿ ಚಾಲಕ ಮೊಬೈಲ್ ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾನೆ. ಆಯನೂರಿನ ಶುಂಟಿ ವ್ಯಾಪಾರಿಗೆ ನಷ್ಟವಾಗಿದ್ದು ಕುಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಆಯನೂರು TO ಪಂಜಾಬ್‌ಗೆ ಲಾರಿ

ಸಯ್ಯದ್‌ ಸಾದಿಕ್‌ ಎಂಬುವವರು ಕಳೆದ 8 ವರ್ಷದಿಂದ ಸುತ್ತಮುತ್ತಲ ರೈತರಿಂದ ಶುಂಠಿ ಖರೀದಿಸಿ ವ್ಯಾಪಾರ ಮಾಡುತ್ತಿದ್ದಾರೆ. ನ.18ರಂದು ಆಯನೂರಿನಿಂದ 180 ಕ್ವಿಂಟಾಲ್‌ ಶುಂಠಿಯನ್ನು ಲಾರಿಯಲ್ಲಿ ಪಂಜಾಬ್‌ಗೆ ರವಾನಿಸಿದ್ದರು. ನ.21ರ ರಾತ್ರಿ ಪಂಜಾಬ್‌ನ ಅಮೃತಸರಕ್ಕೆ ಲಾರಿ ತಲುಪಬೇಕಿತ್ತು. ಆದರೆ ನ.21ರ ಬೆಳಗ್ಗೆಯಿಂದ ಲಾರಿ ಚಾಲಕನ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ.

ವಾಟ್ಸಪ್‌ ಗ್ರೂಪ್‌ನಲ್ಲಿ ಆಘಾತಕಾರಿ ಮೆಸೇಜ್‌

ಈ ಮಧ್ಯೆ ಮಧ್ಯಪ್ರದೇಶದ ಝಾನ್ಸಿಯಲ್ಲಿ ಕರ್ನಾಟಕದ ಲಾರಿಯೊಂದರಲ್ಲಿ ಶುಂಠಿ ಮಾರಾಟ ಮಾಡಲಾಗುತ್ತಿದೆ. ಪ್ರತಿ ಕೆ.ಜಿ. 50 ರೂ. ನಂತೆ ಮಾರಾಟ ಮಾಡುತ್ತಿರುವುದಾಗಿ ಶುಂಠಿ ಬೆಳೆಗಾರರು ಮತ್ತು ವರ್ತಕರ ಸಂಘದ ವಾಟ್ಸಪ್‌ ಗ್ರೂಪ್‌ನಲ್ಲಿ ಮೆಸೇಜ್‌ ಬಂದಿತ್ತು. ವಿಚಲಿತರಾದ ವರ್ತಕ ಸಯ್ಯದ್‌ ಸಾದಿಕ್‌ ಅಮೃತಸರದಲ್ಲಿರುವ ಟ್ರಾನ್ಸ್‌ಪೋರ್ಟ್‌ ಕಚೇರಿಗೆ ಕರೆ ಮಾಡಿ ವಿಚಾರಿಸಿದ್ದು ಲಾರಿ ತಲುಪಿಲ್ಲ ಎಂದು ತಿಳಿಸಿದ್ದರು.

ಲಾರಿ ಚಾಲಕ ಮೋಹನ್‌ ಸೇರಿದಂತೆ ಇಬ್ಬರ ವಿರುದ್ಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದಾಜು 13.77 ಲಕ್ಷ ರೂ. ಮೌಲ್ಯದ 180 ಕ್ವಿಂಟಾಲ್‌ ಶುಂಠಿ ಪತ್ತೆ ಹಚ್ಚಿಕೊಡುವಂತೆ ಸಯ್ಯದ್‌ ಸದಾಕ್‌ ದೂರಿನಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಕಾಂಪೌಂಡ್‌ ವಿಚಾರಕ್ಕೆ ಪ್ರತಿಭಟನೆ, ಪೊಲೀಸರ ಜೊತೆ ಮಾತಿಗೆ ಮಾತು, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 23, 2023

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment