ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 NOVEMBER 2023
SHIMOGA : ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳದಲ್ಲಿ ಗುಂಡಿಗೆ ಬಿದ್ದ ಕಾರ್ಮಿಕನ ಮೇಲೆ ಮಣ್ಣು ಕುಸಿದು ಸಾವನ್ನಪ್ಪಿದ್ದಾನೆ. ಮಂಡೇನಕೊಪ್ಪದ ಸತೀಶ್ ನಾಯ್ಕ್ (27) ಮೃತರು.
ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳದಲ್ಲಿ ಪೈಪ್ಲೈನ್ ಜೋಡಣೆ ಕಾರ್ಯಕ್ಕೆ ಜೆಸಿಬಿಯಿಂದ ಗುಂಡಿ ತೆಗೆಯಲಾಗಿತ್ತು. ಕಾಲು ಜಾರಿ ಸತೀಶ್ ಗುಂಡಿಗೆ ಬಿದ್ದಿದ್ದು ಕೂಡಲೆ ಮಣ್ಣು ಕುಸಿದಿದೆ. ಉಸಿರುಗಟ್ಟಿ ಸತೀಶ್ ಮೃತಪಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜೆಸಿಬಿ ಮೂಲಕ ಮಣ್ಣು ತೆಗೆದು ಸತೀಶ್ನ ರಕ್ಷಣೆ ಯತ್ನಿಸಲಾಗಿದೆ. ಆ ವೇಳೆಗಾಗಲೆ ಆತ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ದೀವರ ಸಾಂಸ್ಕೃತಿಕ ವೈಭವ, ಸಿಗಂದೂರು ಧರ್ಮದರ್ಶಿ ಸೇರಿ ಪ್ರಮುಖರಿಗೆ ಪ್ರಶಸ್ತಿ
LATEST NEWS
- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

About The Editor
ನಿತಿನ್ ಆರ್.ಕೈದೊಟ್ಲು
















