ಆರು ವರ್ಷದಿಂದ ಪ್ರೀತಿಸುತ್ತಿದ್ದ ಯುವಕನ ಹೆಸರು ಹೇಳಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 NOVEMBER 2023

HOSANAGARA : ಪ್ರೀತಿಸಿದ್ದ ಯುವಕ (youth) ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ಮಾತ್ರೆಗಳನ್ನು ನುಂಗಿ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಹೊಸನಗರದ ಯುವತಿ ಮತ್ತು ಯುವಕ 6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ವಿವಾಹವಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಯುವಕ ಸಲುಗೆಯಿಂದ ಇದ್ದ. ಈಗ ಜಾತಿ ಕಾರಣ ನೀಡಿ ಮದುವೆಗೆ ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ- ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ ರಸ್ತೆ ತಡೆ, ಮಾತು ತಪ್ಪಿದ ವಿವಿ ಆಡಳಿತದ ವಿರುದ್ಧ ಗರಂ

ತನ್ನನ್ನು ವಂಚಿಸಿರುವ ಯುವಕ (youth) ಹಾಗೂ ಆತನ ಭಾವನಿಗೆ ಶಿಕ್ಷೆ ವಿಧಿಸಬೇಕು ಎಂದು ಯುವತಿ ವಿಡಿಯೊದಲ್ಲಿ ಒತ್ತಾಯಿಸಿದ್ದಾಳೆ ಎಂದು ಆರೋಪಿಸಲಾಗಿದೆ. ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 28, 2023

Leave a Comment