ಶಿವಮೊಗ್ಗ MRSನಲ್ಲಿ ಭುವನೇಶ್ವರಿಗೆ ಪೂಜೆ, ಅನ್ನ ಸಂತರ್ಪಣೆ | ಕೂಡಲಿಯಲ್ಲಿ ರಥಾರೋಹಣ | ಫಟಾಫಟ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 NOVEMBER 2023

ಎಂಆರ್‌ಎಸ್‌ ಸರ್ಕಲ್‌ನಲ್ಲಿ ಅದ್ಧೂರಿ ರಾಜ್ಯೋತ್ಸವ

FATAFAT-NEWS-1SHIMOGA : ನಗರದ ಎಂಆರ್‌ಎಸ್‌ ಸರ್ಕಲ್‌ನಲ್ಲಿ ಭಗತ್‌ ಸಿಂಗ್‌ ಗೆಳೆಯರ ಬಳಗದ ವತಿಯಿಂದ ಎರಡನೇ ವರ್ಷದ ಕರ್ನಾಟಕ ರಾಜ್ಯೋತ್ಸವ (Karnataka Rajyotsava) ಆಚರಿಸಲಾಯಿತು. ಭುವನೇಶ್ವರಿ ತಾಯಿ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೊಡ್ಡ ಸಂಖ್ಯೆ ಜನರು ಭಾಗವಹಿಸಿದ್ದರು. ರಾಜ್ಯೋತ್ಸವದ ಹಿನ್ನೆಲೆ ಎಂಆರ್‌ಎಸ್‌ ಸರ್ಕಲ್‌ನಲ್ಲಿ ಕರ್ನಾಟಕ ಧ್ವಜದ ಬಣ್ಣ ಹೋಲುವ ಬಂಟಿಂಗ್ಸ್‌ ಹಾಕಲಾಗಿತ್ತು.

ಕೂಡಲಿಯಲ್ಲಿ ರಥಾರೋಹಣ

FATAFAT-NEWS-2SHIMOGA : ಕೂಡಲಿ  ಶ್ರೀ ಚಿಂತಾಮಣಿ ನರಸಿಂಹಸ್ವಾಮಿಯವರ  ರಥಾರೋಹಣ ಮಹೋತ್ಸವ ಕಾರ್ಯಕ್ರಮ ನ.೨೬ ರಿಂದ ನ.29 ರವರೆಗೆ ಅದ್ದೂರಿಯಾಗಿ ನಡೆಯಲಿದೆ. ನಾಲ್ಕು ದಿನಗಳ ಕಾಲ ನಡೆಯುತ್ತಿರುವ ಈ ಜಾತ್ರೆಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಶ್ರೀಮಠದ ಆಡಳಿತ ಮಂಡಳಿ ಪ್ರಕಟಣೆ ಕೋರಿದೆ.

 

ಇದನ್ನೂ ಓದಿ- ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಫೇಸ್‌ಬುಕ್‌ ಗ್ರೂಪ್‌, ಒಳಗಿದ್ದ ಪೋಸ್ಟ್‌ ಕಂಡು ಬೆಂಬಲಿಗರು ಶಾಕ್

ಕಾಂಗ್ರೆಸ್‌ಗೆ ನೇಮಕ

FATAFAT-NEWS-3SHIMOGA : ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ ಹೈದರ್ ಅಲಿ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳಡಿಯಲ್ಲಿ ಪಕ್ಷ ಸಂಘಟನೆ ಮಾಡಬೇಕೆಂದು ಅಧ್ಯಕ್ಷರು ಸೂಚಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 28, 2023

Leave a Comment