ಶಿವಮೊಗ್ಗ ಜಿಲ್ಲೆಯ ರೈತರಿಗೆ ಉಚಿತವಾಗಿ ಮಿನಿ ಕಿಟ್‌ಗಳ ವಿತರಣೆ, ಏನಿದು ಕಿಟ್? ಯಾರು ಪಡೆಯಬಹುದು?

SHIVAMOGGA LIVE NEWS | 28 NOVEMBER 2023 (ಈ ಸುದ್ದಿಯನ್ನು ಇನ್ನು 42 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಪಶು ಸಾಕಾಣಿಕೆಯಲ್ಲಿ ತೊಡಗಿರುವ ಜಿಲ್ಲೆಯ ರೈತರಿಗೆ (farmers) ವಿವಿಧ ಮೇವಿನ ಬೀಜದ ಮಿನಿಕಿಟ್‍ಗಳನ್ನು ಉಚಿತವಾಗಿ ವಿತರಿಸುತ್ತಿದೆ. ರೈತರು ತಮ್ಮ ಆಧಾರ್ ಕಾರ್ಡ್, ಫ್ರೂಟ್ಸ್ ಗುರುತಿನ ಚೀಟಿ, ಜಮೀನಿನ ಪಹಣೆ ಪ್ರತಿ ಮತ್ತು ನೀರಾವರಿ ಜಮೀನನ್ನು ಹೊಂದಿರುವವರು ಇದರ ಉಪಯೋಗ ಪಡೆಯಬಹುದು. ಆಸಕ್ತರು ತಮ್ಮ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಿ ಮೇವಿನ ಬೀಜದ ಮಿನಿಕಿಟ್‍ಗಳನ್ನು ಪಡೆದು ಪಶುಗಳಿಗೆ ಮೇವಿನ ಕೊರತೆಯಾಗದಂತೆ ಮೇವನ್ನು ಬೆಳೆದುಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SMALL-NEWS-CHUTUKU-SUDDI-SHIVAMOGGA-LIVE.webp

ಇದನ್ನೂ ಓದಿ- ಶಿವಮೊಗ್ಗ TO ಮೈಸೂರು 4 ರೈಲುಗಳಿವೆ, ಯಾವ್ಯಾವ ಟೈಮ್‌ಗೆ ಎಲ್ಲಿಂದ ಹೊರಡುತ್ತವೆ? ಎಷ್ಟೊತ್ತಿಗೆ ತಲುಪುತ್ತವೆ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ರೈತರು (farmers)  ತಮ್ಮ ಬಳಿ ಇರುವ ಜಾನುವಾರುಗಳಿಗೆ ಬೇಕಾದ ಮೇವಿನ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಲಭ್ಯತೆ ಇದ್ದಲ್ಲಿ ತಮ್ಮ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಹೆಚ್ಚಿನ ಮೇವಿನ ಪ್ರಮಾಣ, ದರ, ತಮ್ಮ ಹೆಸರು, ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ನೊಂದಾಯಿಸಿಕೊಳ್ಳುವಂತೆ ಇಲಾಖೆಯು ಪ್ರಕಟಣೆಯಲ್ಲಿ ಕೋರಿದೆ.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment