ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 NOVEMBER 2023
SHIMOGA : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣವಿರುವ ಪರ್ಸ್ ಕಳ್ಳತನ (theft) ಪ್ರಕರಣ ಮುಂದುವರೆದಿದೆ. ಮಹಿಳೆಯೊಬ್ಬರ ಬ್ಯಾಗಿನಿಲ್ಲಿದ್ದ 5.72 ಲಕ್ಷ ರೂ. ಮೌಲ್ಯದ ಚಿನ್ನಾಭರಣ (Jewellery) ಕಳ್ಳತನವಾಗಿದೆ.
ಕಳ್ಳತನ ಆಗಿದ್ದು ಹೇಗೆ?
ಎನ್.ಆರ್.ಪುರದ ಮುಡುಬ ಕೊಣಕೆರೆ ವಾಸಿ ಶಶಿಕಲಾ ಅವರು ಶಿವಮೊಗ್ಗದಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನ.23ರಂದು ಚಿತ್ರದುರ್ಗಕ್ಕೆ ಪ್ರಯಾಣಿಸಿದ್ದರು. ಮಗಳ ಮನೆಯಲ್ಲಿದ್ದರು ನ.26ರಂದು ಮದುವೆ ಸಮಾರಂಭಕ್ಕೆ ತಯಾರಾಗಲು ವ್ಯಾನಿಟಿ ಬ್ಯಾಗ್ ತೆಗೆದಾಗ ಪರ್ಸ್ ನಾಪತ್ತೆಯಾಗಿತ್ತು.
ಇದನ್ನೂ ಓದಿ- ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದ ವಿವಿಧೆಡೆ ಮಳೆ ಅಬ್ಬರ, ಎಲ್ಲೆಲ್ಲಿ ಮಳೆಯಾಗುತ್ತಿದೆ?
ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ
ಶಶಿಕಲಾ ಕೆಂಪು ಬಣ್ಣದ ಪರ್ಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ (Jewellery) ಇರಿಸಿದ್ದರು. ಬಂಗಾರದ ಎರಡು ಸರಗಳು, ಎರಡು ಬಳೆ ಇದ್ದವು. ಇವುಗಳ ಮೌಲ್ಯ ಅಂದಾಜು 5.72 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಿವಮೊಗ್ಗದಲ್ಲಿ ಬಸ್ ಹತ್ತುವ ವೇಳೆ ರಶ್ ಇತ್ತು. ಆಗ ವ್ಯಾನಿಟಿ ಬ್ಯಾಗ್‌ನ ಜಿಪ್ ತೆಗೆದು ಪರ್ಸ್ ಕಳ್ಳತ ಮಾಡಿರುವ ಶಂಕೆ ಇದೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















