ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 DECEMBER 2023
SHIMOGA : ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ಖಂಡಿಸಿ ವಕೀಲರ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ವಕೀಲರ ರಕ್ಷಣೆಗೆ ಪ್ರತ್ಯೇಕ ಕಾಯ್ದೆ ರಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಒಂದೂವರೆ ಗಂಟೆ ರಸ್ತೆ ತಡೆ
ವಕೀಲರ ಮೇಲಿನ ಹಲ್ಲೆ ಖಂಡಿಸಿ ವಕೀಲರು ಇವತ್ತು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ನ್ಯಾಯಾಲಯದ ಆವರಣದಿಂದ ಗೋಪಿ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಗೋಪಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ವಕೀಲರು ಆಗ್ರಹಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ, ದಾವಣಗೆರೆ, ಚಿತ್ರದುರ್ಗ ರೈತರಿಗು ಇದೆ ಅವಕಾಶ
ಪೊಲೀಸರ ಜೊತೆ ಮಾತಿಗೆ ಮಾತು
ಇನ್ನು, ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ವಕೀಲರ ಮನವಿ ಆಲಿಸಿದರು. ಆದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಅವರು ಸ್ಥಳಕ್ಕೆ ಆಗಮಿಸಬೇಕು ಎಂದು ವಕೀಲರು ಪಟ್ಟು ಹಿಡಿದರು. ಈ ವೇಳೆ ವಕೀಲರು ಮತ್ತು ಪೊಲೀಸರ ಜೊತೆ ಮಾತಿಗೆ ಮಾತಾಯಿತು.
ಗೂಂಡಾಗಳಂತೆ ವರ್ತನೆ, ಅಮಾನುಷ ಹಲ್ಲೆ
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹಿರಿಯ ವಕೀಲ ಕೆ.ಪಿ.ಶ್ರೀಪಾಲ್, ಇದು ಇಡೀ ಪೊಲೀಸ್ ಇಲಾಖೆ ವಿರುದ್ಧದ ಹೋರಾಟವಲ್ಲ. ಪೊಲೀಸ್ ಇಲಾಖೆಯಲ್ಲಿ ಗೂಂಡಾ ವರ್ತನೆ ಮಾಡುವವರು ಮತ್ತು ಭ್ರಷ್ಟರ ವಿರುದ್ಧದ ಹೋರಾಟ. ಯುವ ವಕೀಲನ ಮೇಲೆ ಗೂಂಡಾಗಳಂತೆ ಹಲ್ಲೆ ನಡೆಸಲಾಗಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಸಿಟಿಯಲ್ಲಿ ಟ್ರಾಫಿಕ್ ಜಾಮ್
ಗೋಪಿ ಸರ್ಕಲ್‌ನಲ್ಲಿ ವಕೀಲರು ಬಹು ಹೊತ್ತು ಪ್ರತಿಭಟನೆ ನಡೆಸಿದ್ದರಿಂದ ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು. ಆದರೆ ಕಿರಿದಾದ ರಸ್ತೆಗಳಿಂದಾಗಿ ಹಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422