ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 DECEMBER 2023
SHIMOGA : ದಲಿತ ಸಂಘರ್ಷ ಸಮಿತಿ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಕುವೆಂಪು ರಂಗಮಂದಿರದಲ್ಲಿ ಸಂವಿಧಾನ ರಕ್ಷಣೆಗಾಗಿ ಸಂವಿಧಾನ ಉಳಿವಿಗಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ ಆಯೋಜಿಸಲಾಗಿತ್ತು. ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಯಾರೆಲ್ಲ ಏನೇನು ಹೇಳಿದರು?
ಮಾವಳ್ಳಿ ಶಂಕರ್, ರಾಜ್ಯ ಪ್ರಧಾನ ಸಂಚಾಲಕ : ಧರ್ಮೋ ರಕ್ಷತಿ ರಕ್ಷಿತಃ ಅನ್ನುವುದಕ್ಕಿಂತಲು ಸಂವಿಧಾನ ರಕ್ಷಣೆ ಮಾಡಬೇಕಿದೆ. ಸಂವಿಧಾನವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡಲಿದೆ. ಸಂವಿಧಾನ ಅಪಾಯದಲ್ಲಿದೆ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿ ನಡೆಸಿದ್ದರು. ಈಗ ಅದು ನಿಜವಾಗುತ್ತಿದೆ ಎಂದೆನಿಸುತ್ತಿದೆ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಜಂತರ್ ಮಂತರ್‌ನಲ್ಲಿ ಸಂವಿಧಾನದ ಪ್ರತಿ ಸುಟ್ಟು ಹಾಕಿದ್ದರು. ದೇಶದ ಸಂವಿಧಾನಕ್ಕೆ ಬಂದಿರುವ ಕುತ್ತನ್ನು ನಾವೆಲ್ಲ ಅರಿತುಕೊಳ್ಳಬೇಕಿದೆ.
ಡಾ. ಮಹಾದೇವಸ್ವಾಮಿ, ಸಹ್ಯಾದ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ : ಸಂವಿಧಾನ ಕೇವಲ ಪುಸ್ತಕವಲ್ಲ, ಅದು ಜೀವನಾಡಿ. ಬ್ರಿಟೀಷ್ ಆಳ್ವಿಕೆಯಿಂದ ಮುಕ್ತವಾದ ನಂತರ ಯಾವ ರೀತಿ ಜೀವನ ಸಾಗಿಸಬೇಕು ಎನ್ನುವ ಆಶಯದೊಂದಿಗೆ ಸಂವಿಧಾನ ರಚನೆ ಆರಂಭವಾಯಿತು. ಆದರೆ ಸಂವಿಧಾನದ ನಿಯಮಗಳನ್ನು ಅರ್ಥ ಮಾಡಿಕೊಳ್ಳುವುದು ಮತ್ತು ಅಳವಡಿಸಿಕೊಳ್ಳುವಲ್ಲಿ ವಿಫಲರಾಗಿದ್ದೇವೆ. ಹಿಂದುಳಿದವರಿಗೆ ಪ್ರಾತಿನಿಧ್ಯ ನೀಡಲು ಸಂವಿಧಾನ ಅತ್ಯವಶ್ಯ. ಸಂವಿಧಾನವನ್ನು ಕೇವಲ ವಿಧಾನಸೌಧದಲ್ಲಿ ಇಟ್ಟು ಪೂಜೆ ಮಾಡುವುದಲ್ಲ. ಅದರ ಆಶಯವನ್ನು ಅನುಷ್ಠಾನಕ್ಕೆ ತರಬೇಕು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಹೆಚ್.ಹಾಲೇಶಪ್ಪ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ, ಸಂಚಾಲಕ ಎಣ್ಣೆಗೆರೆ ವೆಂಟರಾಮಯ್ಯ, ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ಇದನ್ನೂ ಓದಿ – ಮುಷ್ಕರ ಮುಗಿಸಿ ಮನೆಗೆ ಮರಳಿದ ಅಂಗನವಾಡಿ ಕಾರ್ಯಕರ್ತೆಗೆ ಕಾದಿತ್ತು ಶಾಕ್



LATEST NEWS
- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















