ವಿನೋಬನಗರದಲ್ಲಿ ಬೆಳಗ್ಗೆ ಮನೆಯಿಂದ ಹೊರ ಬಂದ ಮಹಿಳೆಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 DECEMBER 2023

SHIMOGA : ಮನೆ ಮುಂದೆ ನಿಲ್ಲಿಸಿದ್ದ ಹೊಸ ಪಲ್ಸರ್‌ ಬೈಕ್‌ (bike) ಕಳ್ಳತನವಾಗಿದೆ. ವಿನೋಬನಗರ 60 ಅಡಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಲಲಿತಮ್ಮ ಎಂಬುವವರ ಹೆಸರಿನಲ್ಲಿದ್ದ ಪಲ್ಸರ್‌ ಬೈಕ್‌ (bike) ಅನ್ನು ಅವರ ಮಗ ಚಲಾಯಿಸುತ್ತಿದ್ದರು. ನ.26ರಂದು ರಾತ್ರಿ ಕೆಲಸ ಮುಗಿಸಿ ಬಂದು ಮನೆ ಮುಂದೆ ಬೈಕ್‌ ನಿಲ್ಲಿಸಿದ್ದರು. ಬೆಳಗ್ಗೆ ಲಲಿತಮ್ಮ ಅವರು ಮನೆಯಿಂದ ಹೊರಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಲಲಿತಮ್ಮ ಮತ್ತು ಅವರ ಮಗ ಬಳಿಕ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಜೂನ್‌ ತಿಂಗಳಲ್ಲಿ ಆ ಬೈಕ್‌ ಖರೀದಿಸಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದರು.‌

ಇದನ್ನೂ ಓದಿ – ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಪರೀಕ್ಷೆ ಯಾವಾಗ? ಆಕ್ಷೇಪಣೆ ಸಲ್ಲಿಸುವುದು ಹೇಗೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment