ಸಾರ್ಥಕ ಸುವರ್ಣ, ಸಂಸದ ರಾಘವೇಂದ್ರಗೆ ಅಭಿನಂದನಾ ಕಾರ್ಯಕ್ರಮ, ಯಾರೆಲ್ಲ ಭಾಗವಹಿಸ್ತಿದ್ದಾರೆ?

SHIVAMOGGA LIVE NEWS | 7 DECEMBER 2023

SHIMOGA : ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ 50 ವಸಂತ ಪೂರೈಸಿದ ಹಿನ್ನೆಲೆ ಮಲೆನಾಡು ವೀರಶೈವ ಲಿಂಗಾಯತ ಮಠಾಧೀಶರ ಪರಿಷತ್‌ನಿಂದ ಡಿ.8ರ ಸಂಜೆ 5.30ಕ್ಕೆ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್‌ ಹಾಲ್‌ನಲ್ಲಿ ಸಾರ್ಥಕ ಸುವರ್ಣ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಿ.ವೈ. ರಾಘವೇಂದ್ರ ಜಿಲ್ಲೆಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ರೈಲ್ವೆ, ಹೈವೇ, ವಿಮಾನ ನಿಲ್ದಾಣ, ನೀರಾವರಿ ಯೋಜನೆಗಳ ಮೂಲಕ ಅಭಿವೃದ್ಧಿಯ ಹೊಸ ಭಾಷ್ಯ ರಚಿಸಿದ್ದಾರೆ. ಹೀಗಾಗಿ ಅವರನ್ನು ಅಭಿನಂದಿಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ- ಶಿವಮೊಗ್ಗ ವಿದ್ಯಾನಗರದಲ್ಲಿ ATMಗೆ ವಂಚಿಸಿದ ದುಷ್ಕರ್ಮಿಗಳು, SBI ಬ್ಯಾಂಕ್‌ಗೆ ಲಕ್ಷ ಲಕ್ಷ ನಷ್ಟ, ಏನಿದು ಕೇಸ್?

ಯಾರೆಲ್ಲ ಭಾಗವಹಿಸುತ್ತಾರೆ?

ಹೊಂಬುಜ ಜೈನಮಠದ ಸ್ವಸ್ತಿಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕರು, ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ನಿಟ್ಟೂರು ನಾರಾಯಣಗುರು ಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ, ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶರಣ ಸಾಹಿತ್ಯ ಪರಿಷತ್‌ನ ರಾಷ್ಟ್ರೀಯ ಅಧ್ಯಕ್ಷ ಡಾ. ಸೋಮಶೇಖ‌ರ್ ಧಾರ್ಮಿಕ ಮತ್ತು ರಾಜಕೀಯ ಮೌಲ್ಯಗಳು ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ರಾಯಚೂರಿನ ಹಿಂದುಸ್ತಾನಿ ಗಾಯಕ ಪಂಡಿತ್ ಅಂಬಯ್ಯನುಲಿ ಅವರಿಂದ ವಚನ ಸಂಗೀತ ಕಾರ್ಯಕ್ರಮ ಇರಲಿದೆ.

ಸುದ್ದಿಗೋಷ್ಠಿಯಲ್ಲಿ ಜಡೆ ಮಠದ ಶ್ರೀ ಮಹಾಂತ ಸ್ವಾಮೀಜಿ, ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಸ್ವಾಮೀಜಿ, ತೊಗರ್ಸಿಯ ಶ್ರೀ ಚನ್ನವೀರ ದೇಶೀಕೇಂದ್ರ ಸ್ವಾಮೀಜಿ, ವೀರಶೈವ ಲಿಂಗಾಯತ ಸಮಾಜದ ಪ್ರಮುಖರಾದ ಡಾ.ಧನಂಜಯ ಸರ್ಜಿ, ಎಸ್‌.ಎಸ್‌. ಜ್ಯೋತಿಪ್ರಕಾಶ್‌, ಮಹೇಶ್‌ ಮೂರ್ತಿ, ಇ.ವಿಶ್ವಾಸ್ ಇತರರಿದ್ದರು.

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : December 7, 2023 at 11:50 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಡಿಸೆಂಬರ್ 7, 2023

Leave a Comment