ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 8 DECEMBER 2023
SHIMOGA : ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಡಿ.12 ರಂದು ಬೆಳಿಗ್ಗೆ 10.30 ರಿಂದ ಶಿಕಾರಿಪುರ ಟೌನ್ ವ್ಯಾಪ್ತಿಯ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರಲಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಸಾರ್ವಜನಿಕರು ಜನತಾದರ್ಶದಲ್ಲಿ ಪಾಲ್ಗೊಂಡು ತಮ್ಮ ಅಹವಾಲು ಸಲ್ಲಿಸಲು ಅವಕಾಶವಿರಲಿದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ.
ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು. ಅರ್ಜಿ ನೋಂದಾಯಿಸಿದ ನಂತರ ಟೋಕನ್ ಪಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ – ಕುವೆಂಪು ವಿಶ್ವವಿದ್ಯಾಲಯ ಬಂದ್ ಮಾಡುವ ಎಚ್ಚರಿಕೆ, ಕುಲಪತಿಗೆ 2 ಬೇಡಿಕೆ ಸಲ್ಲಿಕೆ, ಏನೇನು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422