ಅನುಪಿನಕಟ್ಟೆಯಲ್ಲಿ ಗ್ರಾಮಸ್ಥರ ಆಕ್ರೋಶ, ಪ್ರತಿಭಟನೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 DECEMBER 2023

SHIMOGA : ನಿವೇಶನ ರಹಿತರಿಗೆ ಜಾಗ ನೀಡಬೇಕು, ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಅನುಪಿನಕಟ್ಟೆ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು. ಗ್ರಾಮದ ಸರ್ವೇ ನಂಬರ್‌ 37ರಲ್ಲಿ ಎಲ್ಲ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಅನುಪಿನಟ್ಟೆ ಗ್ರಾಮದಲ್ಲಿ ಸಮುದಾಯ ಭವನ, ಗ್ರಂಥಾಲಯ, ಅಂಗನವಾಡಿ ಇಲ್ಲ. ಇರುವ ಶಾಲೆಯು ಸರ್ಕಾರಿ ಜಾಗದಲ್ಲಿಲ್ಲ. ಇನ್ನು, ಗ್ರಾಮದಲ್ಲಿ ಮೂಲ ಸೌಕರ್ಯ ಒದಗಿಸಿಲ್ಲ. ಗ್ರಾಮದ ಸರ್ವೇ ನಂಬರ್‌ 37ರಲ್ಲಿ 8.32 ಎಕರೆ ಜಾಗವಿದೆ. ಇದರಲ್ಲಿ 4 ಎಕರೆ ಜಾಗದಲ್ಲಿ ಎಲ್ಲಾ ಸೌಲಭ್ಯ ಒದಗಿಸಿ ಉಳಿದ ಜಾಗವನ್ನು ನಿವೇಶನ ರಹಿತರಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು. ಉಪ ವಿಭಾಗಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಆಲಿಸಿದರು. ಮೂಲ ಸೌಕರ್ಯ ಒದಗಿಸುವ ಭರವಸೆ ನೀಡಿದರು.

ಇದನ್ನೂ ಓದಿ – ಜನ ಶತಾಬ್ದಿ, ಇಂಟರ್‌ಸಿಟಿ ವಿರುದ್ಧ ದೂರು, ಬಳಕೆದಾರರ ಸಭೆಯಲ್ಲಿ ಏನೇನೆಲ್ಲ ಚರ್ಚೆಯಾಯ್ತು? ಇಲ್ಲಿದೆ 7 ಪಾಯಿಂಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment