ಶಿವಮೊಗ್ಗದಲ್ಲಿ 2138 ಕೋಟಿ ರೂ. ಕಾಮಗಾರಿಗೆ ಶಂಕುಸ್ಥಾಪನೆ, ದಿನಾಂಕ ನಿಗದಿ, ಪಟ್ಟಿ ರಿಲೀಸ್‌ ಮಾಡಿದ ಸಂಸದ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 DECEMBER 2023

SHIMOGA : ಜಿಲ್ಲೆಯಲ್ಲಿ 2,138 ಕೋಟಿ ರೂ. ಕಾಮಗಾರಿಗೆ ಶಂಕುಸ್ಥಾಪನೆ ಮತ್ತು 139 ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ ನಡೆಯಲಿದೆ. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಜನವರಿ ತಿಂಗಳಲ್ಲಿ ಶಿವಮೊಗ್ಗಕ್ಕೆ ಭೇಟಿ ನೀಡಿದಾಗ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಶಂಕುಸ್ಥಾಪನೆ ಮತ್ತು ಉದ್ಘಾಟನೆಗೆ ಸಿದ್ಧವಾಗಿರುವ ಕಾಮಗಾರಿಗಳ ಪಟ್ಟಿ ಬಿಡುಗಡೆ ಮಾಡಿದರು.

ಶಂಕುಸ್ಥಾಪನೆಗೆ ಸಿದ್ದವಾಗಿರುವ ಕಾಮಗಾರಿಗಳು

ಕಾಮಗಾರಿ 1 : ರಾಷ್ಟ್ರೀಯ ಹೆದ್ದಾರಿ 766ಸಿ ದ್ವಿಪಥದ ರಸ್ತೆ ಕಾಮಗಾರಿ 313.56 ಕೋಟಿ ರೂ. ವೆಚ್ಚ.

ಕಾಮಗಾರಿ 2 : ಶಿವಮೊಗ್ಗದ ತ್ಯಾವರೆಕೊಪ್ಪ ಲಯನ್‌ ಸಫಾರಿಯಿಂದ ತಾಳಗುಪ್ಪದವರೆಗೆ ನಾಲ್ಕು ಪಥದ ರಸ್ತೆ ಅಗಲೀಕರಣ ಕಾಮಗಾರಿ 653 ಕೋಟಿ ರೂ. ವೆಚ್ಚ.

ಕಾಮಗಾರಿ 3 : ರಾಷ್ಟ್ರೀಯ ಹೆದ್ದಾರಿ 169ರಲ್ಲಿ  ನಾಲ್ಕು ಪಥದ ರಸ್ತೆ ಅಗಲೀಕರಣ ಕಾಮಗಾರಿ 39.5 ಕೋಟಿ ರೂ.

ಕಾಮಗಾರಿ 4 : ಸಾಗರದ ಹೊಸೂರು ಸಮೀಪ ರೈಲ್ವೆ ಮೇಲ್ಸೇತುವೆ ಕಾಮಗಾರಿ 198.58 ಕೋಟಿ ರೂ.

ಕಾಮಗಾರಿ 5 : ರಾಷ್ಟ್ರೀಯ ಹೆದ್ದಾರಿ 766ಸಿ ಬೈಂದೂರು ರಾಣೆಬೆನ್ನೂರು ಸೆಕ್ಷನ್‌ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ 394.95 ಕೋಟಿ ರೂ.

ಕಾಮಗಾರಿ 6 : ತೀರ್ಥಹಳ್ಳಿಯ ನೆಲ್ಲಿಸರ ಕ್ಯಾಂಪ್‌ನಿಂದ ತೀರ್ಥಹಳ್ಳಿವರೆಗೆ ನಾಲ್ಕು ಪಥದ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ 538.71 ಕೋಟಿ ರೂ.

ಕಾಮಗಾರಿ 7 : ಹೊಳೆಹೊನ್ನೂರು ಸಮೀಪ ಸೇತುವೆ ಪುನಶ್ಚೇತನ ಕಾಮಗಾರಿಗೆ 4.60 ಕೋಟಿ ರೂ.

ಕಾಮಗಾರಿ 8 : ಶಿವಮೊಗ್ಗದಲ್ಲಿರುವ ತುಂಗಾ ನದಿ ಸೇತುವೆ ಪುನಶ್ಚೇತನಕ್ಕೆ 3.99 ಕೋಟಿ ರೂ.

ಉದ್ಘಾಟನೆಗೆ ಸಿದ್ದವಾಗಿರುವ ಕಾಮಗಾರಿಗಳು

ಕಾಮಗಾರಿ 1 : ರಾಷ್ಟ್ರೀಯ ಹೆದ್ದಾರಿ 766ಸಿ ಬೈಂದೂರು ರಾಣೆಬೆನ್ನೂರು ಸೆಕ್ಷನ್‌ನಲ್ಲಿ 19.77 ಕೋಟಿ ರೂ.ವೆಚ್ಚದ ಸೇತುವೆಗಳ ಉದ್ಘಾಟನೆ.

ಕಾಮಗಾರಿ 2 : ಶಿವಮೊಗ್ಗ – ಮಂಗಳೂರು ಸೆಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ 55.62 ಕೋಟಿ ರೂ.ವೆಚ್ಚದ ಸೇತುವೆಗಳು ಉದ್ಘಾಟನೆ.

ಕಾಮಗಾರಿ 3 : ವಿದ್ಯಾನಗರದಲ್ಲಿ 43.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ವೃತ್ತಾಕಾರದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಉದ್ಘಾಟನೆ.

ಕಾಮಗಾರಿ 4 : ತುಂಗಾ ನದಿಗೆ ಅಡ್ಡಲಾಗಿ 20.12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸೇತುವೆ ಉದ್ಘಾಟನೆ.

ಇದನ್ನೂ ಓದಿ – ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿ ಹೊಸ ಸೇತುವೆ ಉದ್ಘಾಟನೆ, ವಾಹನ ಸಂಚಾರ ಶುರು, ಹೇಗಿದೆ ಸೇತುವೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 18, 2023

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment