ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 DECEMBER 2023
BENGALURU : ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್ ಬಿಡುಗಡೆ ಮಾಡಿದೆ. ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ವೇಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಂದುಜ ಆ್ಯಪ್ ಬಿಡುಗಡೆ ಮಾಡಿದರು.
ಏನಿದು ಬಗರ್ ಹುಕುಂ ಆ್ಯಪ್?
ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ ಎಂದು ಪರಿಶೀಲಿಸುವುದು ಸಾಧ್ಯವಿಲ್ಲ.
ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಹಾಗೂ ಅರ್ಜಿಗಳ ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ.
ಆ್ಯಪ್ ಹೇಗೆ ಕೆಲಸ ಮಾಡುತ್ತೆ?
ಗ್ರಾಮ ಲೆಕ್ಕಿಗ ಸ್ಥಳಕ್ಕೆ ತೆರಳಿ ಈ ಆ್ಯಪ್ ಮೂಲಕ ಜಿಯೋ ಫೆನ್ಸ್ ಮಾಡಿ ಆ ಮಾಹಿತಿಯನ್ನು ಕಂದಾಯ ನಿರೀಕ್ಷಕ ಹಾಗೂ ಸರ್ವೇ ಇಲಾಖೆ ಲಾಗಿನ್‌ಗೆ ಕಳುಹಿಸುತ್ತಾರೆ. ಇದರ ಸಹಾಯದಿಂದ ತಹಶೀಲ್ದಾರ್ ಸ್ಯಾಟಲೈಟ್ ಇಮೇಜ್ ಪಡೆದು ನಿಜಕ್ಕೂ ಅಲ್ಲಿ ಕೃಷಿ ನಡೆಸುತ್ತಿದ್ದಾರ ಎಂಬ ಮಾಹಿತಿ ಕಲೆಹಾಕುತ್ತಾರೆ. ಅಲ್ಲದೆ ಆ ಇಮೇಜ್ ಜೊತೆಗೆ ಎಲ್ಲಾ ಮಾಹಿತಿಯನ್ನು ಬಗರ್ ಹುಕುಂ ಕಮಿಟಿ ಮುಂದೆ ಸಲ್ಲಿಸಿ ಓಟಿಪಿ ಮೂಲಕ ಕೆವೈಸಿ ಮಾಡುವ ಮೂಲಕ ಋಜುವಾತು ಮಾಡುತ್ತಾರೆ.
ಇದನ್ನೂ ಓದಿ – ಸದ್ಯದಲ್ಲೆ ವಾಟ್ಸಪ್‌ನಲ್ಲಿ ರಿಲೀಸ್ ಆಗಲಿದೆ 3 ಹೊಸ ಫೀಚರ್, ಯಾವುದದು? ಏನದರ ಪ್ರಯೋಜನ?
ನಂತರ ಅರ್ಹ ಫಲಾನುಭವಿಗಳಿಗೆ ಪೇಮೆಂಟ್ ನೊಟೀಸ್ ನೀಡಿ ಹಣ ಪಾವತಿಯಾಗುತ್ತಿದ್ದಂತೆ ಅವರಿಗೆ ಹೊಸ ಸರ್ವೇ ನಂಬರ್ ಹಾಗೂ ಡಿಜಿಟಲ್ ಇ-ಸಾಗುವಳಿ ಚೀಟಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422