ಕೊಲೆ ಯತ್ನ ಕೇಸ್‌ ವಿರುದ್ಧ ಪೊಲೀಸ್‌ ಠಾಣೆ ಮುಂದೆ ಬಿಜೆಪಿ, ಜೆಡಿಎಸ್‌ ಪಕ್ಷದಿಂದ ಹೋರಾಟ, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 DECEMBER 2023

BHADRAVATHI : ಡೈರಿ ಚುನಾವಣೆ ವೇಳೆ ವಿನಾಕಾರಣ ಇಬ್ಬರು ಮುಖಂಡರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧದ ಪ್ರಕರಣವನ್ನು ತಕ್ಷಣವೇ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ನಗರದ ಹೊಸಮನೆ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.

ಕೊಲೆ ಯತ್ನ ಪ್ರಕರಣ ದಾಖಲು

ತಾಲ್ಲೂಕಿನ ಕಾಚಗೊಂಡನಹಳ್ಳಿ ಗ್ರಾಮದ ಡೈರಿ ಚುನಾವಣೆ ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಡಿ.ಚಂದ್ರಶೇಖರ್ ಮತ್ತು ಡಿ.ಆನಂದ ಅವರು ತನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ರವಿಕುಮಾರ್‌ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದರು.

ಹುನ್ನಾರದ ಕುರಿತು ತನಿಖೆಯಾಗಲಿ

ಪೊಲೀಸರು ವಾಸ್ತವಾಂಶ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಳ್ಳಬೇಕು. ಗ್ರಾಮದಲ್ಲಿ ಕೊಲೆಯತ್ನ ಅಥವಾ ಯಾವುದೇ ರೀತಿಯ ಗಂಭೀರ ಪ್ರಕರಣ ನಡೆದಿಲ್ಲ. ವ್ಯಕ್ತಿಯೊಬ್ಬರ ದೂರಿನ ಹಿನ್ನೆಲೆಯಲ್ಲಿ ವಿನಾಕಾರಣ ಕೊಲೆ ಯತ್ನ ಪ್ರಕರಣ ದಾಖಲಿಸುವುದು ಸರಿಯಲ್ಲ. ಇದರ ಹಿಂದೆ ಹುನ್ನಾರವಿದೆ. ಸೂಕ್ತ ತನಿಖೆ ಕೈಗೊಂಡು ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಆರ್.ಕರುಣಾಮೂರ್ತಿ, ಎಂ.ಎ.ಅಜಿತ್, ಜಿ.ಧರ್ಮಪ್ರಸಾದ್, ಎಚ್.ಬಿ.ರವಿಕುಮಾರ್, ಮಂಗೋಟೆ ರುದ್ರೇಶ್, ಎಂ. ಮಂಜುನಾಥ್, ರಂಗಸ್ವಾಮಿ, ಸಾವಿತ್ರಮ್ಮ, ಪುಟ್ಟೇಗೌಡ, ಉಮೇಶ್ ಪಾಲ್ಗೊಂಡಿದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಅಮಿತ್‌ ಷಾ, ಪ್ರತಾಪ್‌ ಸಿಂಹ ಫೋಟೊಗೆ ಬೆಂಕಿ ಹಚ್ಚಿ ಆಕ್ರೋಶ, ಪ್ರಧಾನಿ ರಾಜೀನಾಮೆಗೆ ಒತ್ತಾಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 20, 2023

Leave a Comment