ಬಿಜೆಪಿ ರಾಜ್ಯ ಕಮಿಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂವರಿಗೆ ಪ್ರಮಖ ಸ್ಥಾನ, ಯಾರೆಗೆ ಯಾವ ಜವಾಬ್ದಾರಿ?

POLITICAL NEWS : ಬಿಜೆಪಿ ರಾಜ್ಯ ಕಮಿಟಿಗೆ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ರಾಜ್ಯಾಧ್ಯಕ್ಷರನ್ನು ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶಿಸಿದ್ದಾರೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂವರಿಗೆ ಪ್ರಮುಖ ಸ್ಥಾನ ನೀಡಲಾಗಿದೆ.

ಯಾರಿಗೆಲ್ಲ ಯಾವ ಸ್ಥಾನ ಲಭಿಸಿದೆ?

ರಾಜ್ಯ ಉಪಾಧ್ಯಕ್ಷ : ಹತ್ತು ಮಂದಿಯನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಪೈಕಿ ಮಾಜಿ ಸಚಿವ, ಸಾಗರದ ಮಾಜಿ ಶಾಸಕ ಹರತಾಳು ಹಾಲಪ್ಪ ಸ್ಥಾನ ಪಡೆದಿದ್ದಾರೆ.

ರಾಜ್ಯ ಕಾರ್ಯದರ್ಶಿ : ಹತ್ತು ಮಂದಿ ರಾಜ್ಯ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ. ವಿಧಾನ ಪರಿಷತ್‌ ಸದಸ್ಯ, ಶಿವಮೊಗ್ಗದ ಡಿ.ಎಸ್.ಅರುಣ್‌ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ : ಭದ್ರಾವತಿಯ ಸಿ.ಮಂಜುಳಾ ಅವರನ್ನು ಬಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆಯಾಗಿ ನೇಮಿಸಲಾಗಿದೆ. ಈ ಹಿಂದೆ ಮಹಿಳಾ ಆಯೋಗದ ಅಧ್ಯಕ್ಷೆಯಾಗಿದ್ದರು. ಕುವೆಂಪು ವಿವಿ ಸಿಂಡಿಕೇಟ್‌ ಸದಸ್ಯೆಯಾಗಿದ್ದರು. ಅಲ್ಲದೆ ಪಕ್ಷದ ವಿವಿಧ ಜವಾಬ್ದಾರಿ ನಿಭಾಯಿಸಿದ್ದರು.

ಇದನ್ನೂ ಓದಿ – ತುಘಲಕ್‌ನಂತೆ ಸಿದ್ದರಾಮಯ್ಯ ಕೂಡ ಹುಚ್ಚು ದೊರೆ, ಇಲ್ಲಿದೆ ಈಶ್ವರಪ್ಪ ಹೇಳಿಕೆಯ 4 ಪಾಯಿಂಟ್

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌