ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 DECEMBER 2023
SHIMOGA : ಕ್ರಿಸ್ಮಸ್ ಹಬ್ಬದ ಹಿನ್ನೆಲೆ ಶಿವಮೊಗ್ಗದ ಚರ್ಚ್ಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ನಗರದ ವಿವಿಧೆಡೆಯ ಜನರು ಕುಟುಂಬ ಸಹಿತ, ಸ್ನೇಹಿತರ ಜೊತೆಗೆ ಚರ್ಚ್ಗೆ ಭೇಟಿ ನೀಡಿ ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ.
ನಗರದ ಸೇಕ್ರೆಡ್ ಹಾರ್ಟ್ ಚರ್ಚ್ಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಚರ್ಚ್ನ ಮುಂಭಾಗದಲ್ಲಿರುವ ಏಸು ಕ್ರಿಸ್ತನ ಪ್ರತಿಮೆಯ ಪ್ರವೇಶ ದ್ವಾರಕ್ಕೆ ದೀಪಾಲಂಕಾರ ಮಾಡಲಾಗಿದೆ. ಚರ್ಚ್ನ ಮುಖ್ಯ ಕಟ್ಟಡ ಕೂಡ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಚರ್ಚ್ ಮುಂಭಾಗ ಗೋದಳಿ ಮತ್ತು ಉಡುಗೊರೆ ಹೊತ್ತು ಬರುತ್ತಿರುವ ಸಂತಾ ಕ್ಲಾಸ್ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಉದ್ಘಾಟನೆಯಾಗುತ್ತೆ 5ನೇ ಗ್ಯಾರಂಟಿ ಯೋಜನೆ, ಕಾರ್ಯಕ್ರಮಕ್ಕೆ ಸಿಎಂ ಭೇಟಿ, ದಿನಾಂಕ, ಸ್ಥಳ ಫಿಕ್ಸ್
ಚರ್ಚ್ನಲ್ಲಿ ರಾತ್ರಿ ಪ್ರಾರ್ಥನೆ, ದಿವ್ಯ ಬಲಿ ಪೂಜೆ ನೆರವೇರಿಸಲಾಗುತ್ತದೆ. ಬಳಿಕ ಗೋದಲಿ ಮುಂದೆ ಪ್ರಾರ್ಥನೆ ನೆರವೇರಲಿದೆ. ಬಿಷಪ್, ವಿವಿಧ ಚರ್ಚ್ಗಳ ಧರ್ಮಗುರುಗಳು ಪ್ರಾರ್ಥನೆ ವೇಳೆ ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗದ ಕ್ರೈಸ್ತ ಸಮುದಾಯದವರು ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ.





LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















