ಭದ್ರಾವತಿಯಲ್ಲಿ ವೀರಾಂಜನೇಯ ಸ್ವಾಮಿ ಅದ್ಧೂರಿ ರಥೋತ್ಸವ, ಹೇಗಿತ್ತು ಉತ್ಸವ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 25 DECEMBER 2023

BHADRAVATHI : ಹುತ್ತಾ ಕಾಲೋನಿಯ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಭದ್ರಾವತಿ ಸೇರಿದಂತೆ ವಿವಿಧೆಡೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ದೇವಾಲಯದ ಪ್ರಧಾನ ಅರ್ಚಕ ರಾಘವೇಂದ್ರ ಉಪಾದ್ಯಾಯ ಮತ್ತು ಸಂಗಡಿಗ ಪೂಜಾ ಅರ್ಚಕರು ಧಾರ್ಮಿಕ ವಿಧಿಗಳನ್ನು ಪೂರೈಸಿ ಉತ್ಸವ ಮೂರ್ತಿಯನ್ನು ರಥದೊಳಗೆ ಪ್ರತಿಷ್ಠಾಪಿಸಿ ಆರತಿ ಬೆಳಗಿದರು. ನೆರೆದಿದ್ದ ಭಕ್ತರು ಘೋಷಣೆ ಮೊಳಗಿಸಿದರು. ಬಳಿಕ ಭಕ್ತರು ತೇರನ್ನು ಎಳೆಯುವುದರ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.

ಸಮೀಪದ ಸರ್‌ಎಂವಿ ಆಟೊ ನಿಲ್ದಾಣ ಮುಂಭಾಗದವರೆಗೆ ರಥೋತ್ಸವ ನೆರವೇರಿಸಲಾಯಿತು. ದಾರಿಯುದ್ದಕ್ಕೂ ಭಕ್ತರು ಹರಕೆಯ ಪದಾರ್ಥಗಳನ್ನು ರಥದ ಮೇಲೆ ತೂರಿ ಹರಕೆ ತೀರಿಸಿದರು.

ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ, ಕಾಂಗ್ರೆಸ್‌ ಮುಖಂಡ ಎಚ್.ಸಿ.ದಾಸೇಗೌಡ, ಕಬಡ್ಡಿ ಕರಿಯಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ – ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಮಹತ್ವದ ಘೋಷಣೆ ಮಾಡಿದ ಶಿಕ್ಷಣ ಸಚಿವ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment