ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 DECEMBER 2023
SHIMOGA : ಸಾಕು ನಾಯಿ ಒಂದರ ಮೇಲೆ ಗುಂಡು ಹಾರಿಸಿದ ವ್ಯಕ್ತಿಯೊಬ್ಬನ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ನಾಯಿಗೆ ಗುಂಡು ಹಾರಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನಾಯಿಗಳ ನಡುವೆ ಜಗಳ
ಶಿವಮೊಗ್ಗದ ಅಮೀರ್ ಅಹಮದ್ ಕಾಲೋನಿಯಲ್ಲಿ ಚಂದ್ರಿಕಾ ಎಂಬುವವರು ಕಳೆದ 8 ವರ್ಷದಿಂದ ಹೆಣ್ಣು ನಾಯಿ ಸಾಕಿದ್ದಾರೆ. ಈಚೆಗೆ ಈ ನಾಯಿ ಅದೇ ಬೀದಿಯಲ್ಲಿರುವ ವ್ಯಕ್ತಿಯೊಬ್ಬರ ಮನೆಯ ಸಾಕು ನಾಯಿಗೆ ಕಚ್ಚಿತ್ತು. ಇದರಿಂದ ಆಕ್ರೋಶಗೊಂಡ ಆತ, ಚಂದ್ರಿಕಾ ಅವರ ಮನೆ ನಾಯಿಗೆ ಕಲ್ಲು ಮತ್ತು ದೊಣ್ಣೆಯಿಂದ ಹೊಡೆಯುತ್ತಿದ್ದರು. ಹತ್ಯೆ ಮಾಡುವುದಾಗಿ ಹೇಳುತ್ತಿದ್ದರು ಎಂದು ಆರೋಪಿಸಲಾಗಿದೆ.
ಗುಂಡಿನ ದಾಳಿ, ಸಿಸಿಟಿವಿಯಲ್ಲಿ ಸೆರೆ
ಡಿ.24ರಂದು ಮಧ್ಯಾಹ್ನ ಗುಂಡಿನ ಶಬ್ದ ಕೇಳಿಸಿತ್ತು. ಚಂದ್ರಿಕಾ ಅವರು ಮನೆಯಿಂದ ಹೊರ ಬಂದಾಗ ಆ ವ್ಯಕ್ತಿ ಏರ್ ಗನ್ ಹಿಡಿದು ಮನೆ ಕಡೆಗೆ ತೆರಳುತ್ತಿದ್ದ. ಅಲ್ಲದೆ ಚಂದ್ರಿಕಾ ಅವರ ಸಾಕು ನಾಯಿ ಸೊಂಟದ ಭಾಗದಲ್ಲಿ ಗಾಯವಾಗಿದ್ದು ಕಾಣಿಸಿತು. ಹಾಗಾಗಿ ಮನೆಯಲ್ಲಿ ಚಿಕಿತ್ಸೆ ನೀಡಲಾಯಿತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಿಸಿಟಿವಿ ಪರಿಶೀಲಿಸಿದಾಗ ಕಾರಿನ ಕೆಳಗೆ ಮಲಗಿದ್ದ ನಾಯಿ ಮೇಲೆ ಆ ವ್ಯಕ್ತಿ ಗುಂಡು ಹಾರಿಸಿರುವ ದೃಶ್ಯ ಸೆರೆಯಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ – ಮಹಿಳೆಯರಿಗೆ ಗುಡ್ ನ್ಯೂಸ್, ಗ್ರಾಮ ಪಂಚಾಯಿತಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಕ್ಯಾಂಪ್, ಯಾವಾಗ?
ಘಟನೆ ಸಂಬಂಧ ಮುಸ್ತಫಾ ಖಾನ್ ಎಂಬಾತನ ವಿರುದ್ಧ ಚಂದ್ರಿಕಾ ಅವರು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 11ರ ಅಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್ ಪಾಸಿಟಿವ್
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






