ವಿಧಾನಸೌಧದವರೆಗೆ ಪಾದಯಾತ್ರೆ, ಜೀವನ ಭದ್ರತೆಗೆ ಶಿವಮೊಗ್ಗದಲ್ಲಿ ಆಯನೂರು ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 JANUARY 2023

SHIMOGA : ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ತುಮಕೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಿದರು. ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜುಗಳ ಅತಿಥಿ ಉಪನ್ಯಾಸಕರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಈ ಮಧ್ಯೆ ವಿಧಾನ ಪರಿಷತ್‌ ಮಾಜಿ ಸದಸ್ಯ ಆಯನೂರು ಮಂಜುನಾಥ್‌, ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆಗೆ ಆಗ್ರಹಿಸಿದ್ದಾರೆ.

ತುಮಕೂರಿನಿಂದ ಪಾದಯಾತ್ರೆ

ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ತುಮಕೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯ ಅತಿಥಿ ಉಪನ್ಯಾಸಕರ ಜೊತೆಗೆ ಶಿವಮೊಗ್ಗ ಜಿಲ್ಲೆಯ ಅತಿಥಿ ಉಪನ್ಯಾಸಕರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಈ ಮಧ್ಯೆ ಸೇವೆಗೆ ಗೈರಾಗಿರುವ ಅತಿಥಿ ಉಪನ್ಯಾಸಕರ ಪಟ್ಟಿ ನೀಡುವಂತೆ ಸರ್ಕಾರ ತಿಳಿಸಿದೆ ಎಂದು ವರದಿಯಾಗಿತ್ತು.

ಜೀವನ ಭದ್ರತೆ ಬೇಕಿದೆ

ಇತ್ತ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಎಂಎಲ್‌ಸಿ ಆಯನೂರು ಮಂಜುನಾಥ್‌, 10 ವರ್ಷ ನಿರಂತರ ಸೇವೆ ಸಲ್ಲಿಸಿ ನಿವೃತ್ತರಾಗುವ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡುವುದಾಗಿ ಹಾಗೂ ಈಗ ಪಡೆಯುತ್ತಿರುವ ಮಾಸಿಕ ವೇತನಕ್ಕೆ 5 ಸಾವಿರ ರೂ. ಸೇರಿಸಿ ಕೊಡಲಾಗುತ್ತದೆ. ವೈದ್ಯಕೀಯ ಸೌಲಭ್ಯ, ಪ್ರತಿ ತಿಂಗಳು ಒಂದು ರಜೆ ಕೊಡುವುದಾಗಿ ಸರ್ಕಾರ ಘೋಷಿಸಿದೆ. ಇದು ಸಮಾಧಾನಕರ. ಆದರೆ ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆ ಒದಗಿಸುವುದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ – ಎಳ್ಳಮಾವಾಸ್ಯೆ ಜಾತ್ರೆ, ತೀರ್ಥಹಳ್ಳಿಯಲ್ಲಿ ಸಂಗ್ರಹವಾಗಲಿದೆ ಹೊರೆ ಕಾಣಿಕೆ, ನಾಲ್ಕು ವಾಹನಗಳಿಗೆ ಸಿಕ್ತು ಚಾಲನೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment