ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 JANUARY 2024
SAGARA : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಮೂವರಿಗೆ ಡಿಕ್ಕಿ ಹೊಡೆದಿದೆ. ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಸಾಗರ ತಾಲೂಕು ಹೊಸೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗದಿಂದ ಶಿರಸಿಗೆ ತೆರಳುತ್ತಿದ್ದ ಕಾರು ಹೊಸೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ರಸ್ತೆ ಬದಿ ನಿಂತಿದ್ದ ಮೂವರು ಗ್ರಾಮಸ್ಥರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೊಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ – ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ದಿನಾಂಕ ಪ್ರಕಟ, ಆನ್ ಆಫ್ ಮಾದರಿ ಪಾಲನೆಗೆ ನಿರ್ಧಾರ
ವೇಗವಾಗಿದ್ದ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಂಬ ಮುರಿದು ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422