ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಸಿಎಂ ಸಿದ್ದರಾಮಯ್ಯ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JANUARY 2024

SHIMOGA : ಯುವನಿಧಿ ಯೋಜನೆಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.12ರಂದ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ಹೆಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 11.50ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.10 ಗಂಟೆಗೆ ನಗರದ ಫ್ರೀಡಂ ಪಾರ್ಕ್‌ಗೆ ತಲುಪಲಿದ್ದಾರೆ.

ಮಧ್ಯಾಹ್ನ 12.30ಕ್ಕೆ ಯುವ ನಿಧಿ ಯೋಜನೆ ಚಾಲನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಫ್ರೀಡಂ ಪಾರ್ಕ್‌ನಿಂದ ವಿಮಾನ ನಿಲ್ದಾಣಕ್ಕೆ ಹಿಂತಿರುಗಲಿದ್ದಾರೆ. ಸಂಜೆ 4.20ಕ್ಕೆ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ತೆರಳಲಿದ್ದಾರೆ. ಸಂಜೆ 5.10ಕ್ಕೆ ಬೆಂಗಳೂರಿನ ಹೆಚ್‌.ಎ.ಎಲ್‌ ವಿಮಾನ ನಿಲ್ದಾಣ ತಲುಪಲಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗಕ್ಕೆ ಸಿಎಂ ಸಿದ್ದರಾಮಯ್ಯ, ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಹೆಚ್ಚು ಜನ ಭಾಗಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 10, 2024

Leave a Comment