ಜನರ ಮನವಿಗೆ ಕ್ಯಾರೆ ಅನ್ನಲಿಲ್ಲ, ಸಿಎಂ ಭೇಟಿಗೆ ಮುನ್ನ ಶಿವಮೊಗ್ಗದ ಗುಂಡಿಗಳೆಲ್ಲ ಮಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JANUARY 2024

SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಗಣ್ಯರು ಸಂಚರಿಸುವ ರಸ್ತೆಗಳು ಗುಂಡಿ ಮುಕ್ತವಾಗುತ್ತಿವೆ. ಕಸ ತೆಗೆದು ಸ್ವಚ್ಛಗೊಳಿಸಲಾಗುತ್ತಿದೆ.

ಜ.12ರಂದು ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಅಧಿಕಾರಿಗಳು ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಅವರು ಫ್ರೀಡಂ ಪಾರ್ಕ್‌ ತಲುಪುವ ಮಾರ್ಗದಲ್ಲಿದ್ದ ಗುಂಡಿಗಳನ್ನು ಅಧಿಕಾರಿಗಳು ಬಂದ್‌ ಮಾಡಿಸುತ್ತಿದ್ದಾರೆ.

ಹೊಳೆ ಸ್ಟಾಪ್‌ ಬಳಿ ಗುಂಡಿ ಬಂದ್‌

ಶಿವಮೊಗ್ಗದ ಹೊಳೆ ಬಸ್‌ ನಿಲ್ದಾಣದ ಸಮೀಪ ಎನ್‌ಸಿಸಿ ಕಚೇರಿ ಎದುರು ದೊಡ್ಡ ಗುಂಡಿಗಳಾಗಿದ್ದವು. ಈ ಕುರಿತು ಸಾರ್ವಜನಿಕರು, ವಿವಿಧ ಸಂಘಟನೆಗಳು ಅಧಿಕಾರಿಗಳಿಗೆ ತಿಳಿಸಿದ್ದರು. ಆದರೆ ಗುಂಡಿಗಳನ್ನು ಬಂದ್‌ ಮಾಡಿರಲಿಲ್ಲ. ಈಗ ಗಣ್ಯಾತಿಗಣ್ಯರು ಆಗಮಿಸುತ್ತಿರುವ ಹಿನ್ನೆಲೆ ಗುಂಡಿಗಳೆಲ್ಲ ಮಾಯವಾಗುತ್ತಿವೆ. ಡಾಂಬಾರ್‌ ಹಾಕಿ, ರೋಲರ್‌ ಹತ್ತಿಸಿ ಗುಂಡಿ ಮುಕ್ತಗೊಳಿಸಲಾಗಿತ್ತಿದೆ.

shimoga city pot holes cleared ahead of CM Siddaramaiah Visit

ರಸ್ತೆ, ಫುಟ್‌ ಪಾತ್‌ ಕ್ಲೀನ್‌

ಇನ್ನು, ರಸ್ತೆ, ಫುಟ್‌ ಪಾತ್‌ಗಳ ಸ್ವಚ್ಛತಾ ಕಾರ್ಯವು ಬಿರುಸಾಗಿ ನಡೆಯುತ್ತಿದೆ. ಗಣ್ಯರು ಸಾಗುವ ಮಾರ್ಗದಲ್ಲಿ ರಸ್ತೆಯ ಅಕ್ಕಪಕ್ಕ ಇದ್ದ ಮಣ್ಣು ತೆರವು ಮಾಡಲಾಗುತ್ತಿದೆ. ಫುಟ್‌ ಪಾತ್‌ ಮೇಲಿದ್ದ ಕಸ ತೆಗೆದು ಕ್ಲೀನ್‌ ಮಾಡಲಾಗುತ್ತಿದೆ. ಮುಖ್ಯಮಂತ್ರಿ, ಗಣ್ಯರು ಸಾಗುವ ಮಾರ್ಗ ಅಕ್ಷರಶಃ ಸ್ವಚ್ಛ ಶಿವಮೊಗ್ಗವಾಗಿ ಕಂಗೊಳಿಸುತ್ತಿದೆ.

shimoga city cleaning ahead of CM Siddaramaiah Visit

ನಾಗರಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾಗ ಗುಂಡಿಗಳನ್ನು ಮುಚ್ಚದ ಆಡಳಿತ ಸಿಎಂ ಭೇಟಿ ಹಿನ್ನೆಲೆ ಕಾರ್ಯಪ್ರವೃತ್ತವಾಗಿದೆ. ಸಿಎಂ, ಸಚಿವರು, ಹಿರಿಯ ಅಧಿಕಾರಿಗಳು ಆಗಿಂದಾಗ ಶಿವಮೊಗ್ಗಕ್ಕೆ ಭೇಟಿ ನೀಡಿದರೆ ನಗರದ ಪ್ರಮುಖ ರಸ್ತೆಗಳು ಗುಂಡಿ ಮುಕ್ತವಾಗಿರುತ್ತವೆ ಎಂಬುದು ಸಾರ್ವಜನಿಕರ ಅಭಿಪ್ರಾಯ.

ಇದನ್ನೂ ಓದಿ – ಗಿಳಿಶಾಸ್ತ್ರ ಹೇಳುತ್ತಿದ್ದ ಇಬ್ಬರು ಬಂಧನ, ಎರಡು ಗಿಳಿಗಳು ವಶಕ್ಕೆ

shimoga city cleaning ahead of CM Siddaramaiah Visit

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 10, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment