ಶಿವಮೊಗ್ಗ ನಗರದಲ್ಲಿ ಜ.12ರಂದು ವಾಹನ ಸಂಚಾರ ಮಾರ್ಗ ಬದಲಾವಣೆ, ವಿವಿಧೆಡೆ ಪಾರ್ಕಿಂಗ್‌ ನಿಷೇಧ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JANUARY 2024

SHIMOGA : ಜ.12ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಯುವ ನಿಧಿ ಯೋಜನೆ ಚಾಲನೆ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಮತ್ತು ದೊಡ್ಡ ಸಂಖ್ಯೆಯ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ನಗರದ ವಿವಿಧೆಡೆ ವಾಹನ ಸಂಚಾರದ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್‌ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ.

ಜ.12ರಂದು ಬೆಳಗ್ಗೆ 6 ರಿಂದ ಸಂಜೆ 6.3ರವರೆಗೆ : ವಾಹನ ಮಾರ್ಗ ಬದಲಾವಣೆ

ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುವ ವಾಹನಗಳು ಆಲ್ಕೊಳ ಸರ್ಕಲ್ ಗೋಪಾಳ ಸರ್ಕಲ್ ನ್ಯೂಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು. ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂಮಂಡ್ಲಿ ಸರ್ಕಲ್ ಗೋಪಾಳ ಸರ್ಕಲ್ ಆಲ್ಕೊಳ ಮಾರ್ಗವಾಗಿ ಸಾಗರ ರಸ್ತೆ ಬಂದು ಸೇರಬಹುದು.

ಶಿವಮೊಗ್ಗದಿಂದ ಶಿಕಾರಿಪುರ, ನ್ಯಾಮತಿ ಸೊರಬ ಕಡೆ ಹೋಗುವ ಎಲ್ಲಾ ವಾಹನಗಳು ಆಯನೂರು ಹಾರನಹಳ್ಳಿ ಸವಳಂಗ ಮಾರ್ಗವಾಗಿ ಚಲಿಸುವುದು. ಶಿಕಾರಿಪುರ ನ್ಯಾಮತಿ ಸೊರಬ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಎಲ್ಲಾ ವಾಹನಗಳು ಸವಳಂಗ ಹಾರನಹಳ್ಳಿ ಆಯನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಬರಬೇಕು.

ಇದನ್ನೂ ಓದಿ – ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಸಿಎಂ ಸಿದ್ದರಾಮಯ್ಯ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

ಶಿವಮೊಗ್ಗ ನಗರದಿಂದ ಅಬ್ಬಲಗೆರೆ, ಕೊಮ್ಮನಾಳ್, ಕುಂಚೇನಹಳ್ಳಿ ತಾಂಡಗಳಿಗೆ ಹೋಗುವ ಎಲ್ಲಾ ವಾಹನಗಳು ರಾಗಿಗುಡ್ಡ ಕುವೆಂಪು ನಗರದ ಮುಖಾಂತರ ಚಲಿಸಬೇಕು. ಅಬ್ಬಲಗೆರೆ, ಕೊಮ್ಮನಾಳ್, ಕುಂಚೇನಹಳ್ಳಿ ತಾಂಡಗಳಿಂದ ಶಿವಮೊಗ್ಗ ನಗರಕ್ಕೆ ಬರುವ ಎಲ್ಲಾ ವಾಹನಗಳು ಕುವೆಂಪು ನಗರ, ರಾಗಿಗುಡ್ಡ, ಸಂಗೊಳ್ಳಿ ರಾಯಣ್ಣ ಸರ್ಕಲ್ ಮುಖಾಂತರ ಚಲಿಸಬೇಕು.

ವಿವಿಧೆಡೆ ವಾಹನ ನಿಲುಗಡೆ ನಿಷೇಧ

ಆಲ್ಕೊಳ ಸರ್ಕಲ್‍ನಿಂದ ಪೊಲೀಸ್ ಚೌಕಿ ಮಾರ್ಗವಾಗಿ ಉಷಾ ನರ್ಸಿಂಗ್‌ ಹೋಂ ಸರ್ಕಲ್‍ವರೆಗೆ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಹೆಲಿಪ್ಯಾಡ್ ಸರ್ಕಲ್‍ನಿಂದ ಜೈಲ್ ಸರ್ಕಲ್‍ವರೆಗೆ ಹಾಗೂ ಜೈಲ್ ಸರ್ಕಲ್‍ನಿಂದ ಲಕ್ಷ್ಮೀ ಟಾಕೀಸ್‍ವರೆಗೆ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಇದನ್ನೂ ಓದಿ – ಜನರ ಮನವಿಗೆ ಕ್ಯಾರೆ ಅನ್ನಲಿಲ್ಲ, ಸಿಎಂ ಭೇಟಿಗೆ ಮುನ್ನ ಶಿವಮೊಗ್ಗದ ಗುಂಡಿಗಳೆಲ್ಲ ಮಾಯ

ಎಂ.ಆರ್.ಎಸ್ ಸರ್ಕಲ್ ಬೈಪಾಸ್ ರಸ್ತೆ ಸಂದೇಶ್ ಮೋಟಾರ್ ಸರ್ಕಲ್‍ನಿಂದ ಅಶೋಕ ಸರ್ಕಲ್ ಮೂಲಕ ಹೆಲಿಪ್ಯಾಡ್ ಮಾರ್ಗವಾಗಿ ವಿನೋಬನಗರ ಕೆಳದಿ ಚೆನ್ನಮ್ಮ ರಸ್ತೆ ಸೈಕಲೋತ್ಸವ ಸರ್ಕಲ್‍ನಿಂದ ವಿನೋಬನಗರ ಕೆ.ಇ.ಬಿ ಆಫೀಸ್‍ವರೆಗೆ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಇದನ್ನೂ ಓದಿ – ‘ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬಕ್ಕೆ 5 ಸಾವಿರ ರೂ., ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 75 ಲಕ್ಷ ರೂ.ʼ

ರಾಜ್‍ಕುಮಾರ್ ಸರ್ಕಲ್‍ನಿಂದ ಮೇದಾರ ಕೇರಿ ರಸ್ತೆ, ಬೊಮ್ಮನಕಟ್ಟೆ ರೈಲ್ವೆ ಗೇಟ್‍ವರೆಗೆ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಪೊಲೀಸ್ ಚೌಕಿಯಿಂದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿ ಶನೇಶ್ವರ ದೇವಸ್ಥಾನ ರಸ್ತೆ ಮಾರ್ಗವಾಗಿ ಬೊಮ್ಮನಕಟ್ಟೆ ರೈಲ್ವೆ ಗೇಟ್‍ಗೆ ಹೋಗುವ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 10, 2024

Leave a Comment