SHIVAMOGGA LIVE NEWS | 11 JANUARY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಮುಖ್ಯಮಂತ್ರಿ ಸಿದ್ದರಾಮಯ್ಯ ನಗರಕ್ಕೆ ಅಗಮಿಸುತ್ತಿರುವ ಬೆನ್ನಲ್ಲೆ ಬಿಜೆಪಿ ಯುವ ಮೋರ್ಚಾದ ಮೂವರು ಕಾರ್ಯಕರ್ತರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಸಂಭವನೀಯ ಶಾಂತಿಭಂಗದ ಮಾಹಿತಿ ಆಧರಿಸಿ ಕಾರ್ಯಕರ್ತರಾದ ಸುಭಾಷ್ ಶಾಸ್ತ್ರಿ, ಚಿದಾನಂದಮೂರ್ತಿ ಮತ್ತು ದಿನೇಶ್ ಗೌಡ ಎಂಬುವವರ ಮೇಲೆ ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಸಮನ್ಸ್ ಹೊರಡಿಸಿದ್ದಾರೆ.
ದೊಡ್ಡಪೇಟೆ ಪೊಲೀಸರ ಕೋರಿಕೆ ಮೇರೆಗೆ ಸಮನ್ಸ್ ಜಾರಿ ಮಾಡಿರುವುದಾಗಿ ಉಲ್ಲೇಖಿಸಲಾಗಿದೆ. ಆದರೆ ಯಾವುದೇ ನಿರ್ದಿಷ್ಟ ಕಾರಣ ತೋರಿಸಿಲ್ಲ. ಇದು ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ
2018ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾಗ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ್ದರು. ವಿಷಯ ತಿಳಿದು ಆಗ ಸಿಎಂ ಭದ್ರತೆ ಜವಾಬ್ದಾರಿ ವಹಿಸಿಕೊಂಡಿದ್ದ ಐಪಿಎಸ್ ಅಧಿಕಾರಿ ಭೀಮಾಶಂಕರ್ ಗುಳೇದ್ ಡಮ್ಮಿ ಬೆಂಗಾವಲು ಪಡೆಯೊಂದಿಗೆ ಕುವೆಂಪು ರಸ್ತೆಯಲ್ಲಿ ಸಾಗಿದ್ದರು. ಈ ವೇಳೆ ಸಿಎಂ ಕಾರು ಎಂದು ಬೆಂಗಾವಲು ಪಡೆ ಕಾರುಗಳನ್ನು ಬಿಜೆಪಿ ಕಾರ್ಯಕರ್ತರು ತಡೆದು ಕಪ್ಪು ಬಾವುಟ ಪ್ರದರ್ಶಿಸಿದ್ದರು. ಈ ವೇಳ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಜ.12ರಂದು ವಾಹನ ಸಂಚಾರ ಮಾರ್ಗ ಬದಲಾವಣೆ, ವಿವಿಧೆಡೆ ಪಾರ್ಕಿಂಗ್ ನಿಷೇಧ, ಎಲ್ಲೆಲ್ಲಿ?
ಈಗ ಜ.12ರಂದು ಯುವನಿಧಿ ಯೋಜನೆಗೆ ಚಾಲನೆ ನೀಡಲು ಸಿದ್ದರಾಮಯ್ಯ ನಗರಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರೊಬ್ಬರು 2018ರಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಸಿಎಂಗೆ ಸುಸ್ವಾಗತ ಎಂದು ಬರೆದುಕೊಂಡಿದ್ದಾರೆ ಎನ್ನಲಾಗಿದೆ. ಇದೆ ಕಾರಣಕ್ಕೆ ಸಮನ್ಸ್ ಜಾರಿ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






