ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಸಜ್ಜಾಯ್ತು ಬೃಹತ್‌ ವೇದಿಕೆ, ಸಾವಿರ ಸಾವಿರ ಚೇರುಗಳು, ಬಿಗಿ ಭದ್ರತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 JANUARY 2024

SHIMOGA : ಯುವನಿಧಿ ಯೋಜನೆ ಚಾಲನೆಗೆ ಶಿವಮೊಗ್ಗ ಫ್ರೀಡಂ ಪಾರ್ಕ್‌ ಸಜ್ಜಾಗಿದೆ. ಒಂದು ಲಕ್ಷ ಜನರು ಸೇರುವ ನಿರೀಕ್ಷೆ ಇರುವುದರಿಂದ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೆ ವೇದಿಕೆ ಸಿದ್ಧವಾಗಿದ್ದು ಅಂತಿಮ ಹಂತದ ತಯಾರಿ ನಡೆಯುತ್ತಿದೆ.

ಏನೇನೆಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ?

ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ವೇದಿಕೆ ಸಿದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಕೂರಲು ವ್ಯವಸ್ಥೆಯಾಗಿದೆ. ಯಾರಂದರೆ ಅವರು ವೇದಿಕೆ ಬಳಿ ತೆರಳದಂತೆ ತಡೆಯಲು ಸುತ್ತಲು ಬ್ಯಾರಿಕೇಡ್‌ ಅಳವಡಿಸಲಾಗಿದೆ.

ವೇದಿಕೆ ಮುಂಭಾಗ ಮಾಧ್ಯಮ ಮತ್ತು ವಿವಿಐಪಿ ಗ್ಯಾಲರಿ ಮಾಡಲಾಗಿದೆ. ಇದರ ಸುತ್ತಲು ಬ್ಯಾರಿಕೇಡ್‌ ಹಾಕಲಾಗಿದೆ. ಇನ್ನು, ಇದರ ಹಿಂಭಾಗದಲ್ಲಿ ದೊಡ್ಡ ಸಂಖ್ಯೆಯ ಕುರ್ಚಿಗಳನ್ನು ಹಾಕಲಾಗಿದೆ. ಹಿಂಬದಿ ಕುಳಿತವರು ವೇದಿಕೆ ಕಾರ್ಯಕ್ರಮ ಕಣ್ತುಂಬಿಕೊಳ್ಳಲು ಅಲ್ಲಲ್ಲಿ ದೊಡ್ಡ ಡಿಜಿಟಲ್‌ ಸ್ಕ್ರೀನ್‌ಗಳನ್ನು ಅಳವಡಿಸಲಾಗಿದೆ. ಅಲ್ಲಲ್ಲಿ ದೊಡ್ಡ ಸ್ಪೀಕರ್‌ಗಳನ್ನು ಇರಿಸಲಾಗಿದೆ.

y4

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂತು ಏರ್‌ ಆಂಬುಲೆನ್ಸ್‌ ವಿಮಾನ, ಮೆಟ್ರೋ ಆಸ್ಪತ್ರೆಯಿಂದ ಮಣಿಪಾಲಕ್ಕೆ ರೋಗಿ ಶಿಫ್ಟ್‌

ಇನ್ನು, ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಊಟದ ವ್ಯವಸ್ಥೆಯಾಗಿದೆ. ಸರತಿಯಲ್ಲಿ ನಿಂತು ಊಟ ಬಡಿಸಿಕೊಳ್ಳಲು ಬ್ಯಾರಿಕೇಡ್‌ಗಳನ್ನು ಹಾಕಿ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ. ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಲಾಗಿದೆ. ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕರು, ವಿವಿಐಪಿಗಳ ಪ್ರವೇಶಕ್ಕೆ ಪ್ರತ್ಯೇಕ ದ್ವಾರಗಳನ್ನು ನಿಗದಿಪಡಿಸಲಾಗಿದೆ. ವಿವಿಐಪಿಗಳ ಪ್ರವೇಶ ದ್ವಾರದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.‌

Yuvanidhi Programme at Freedom Park

Yuvanidhi Programme at Freedom Park

Yuvanidhi Programme at Freedom Park

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment