ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 JANUARY 2024
THIRTHAHALLI : ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ಇವತ್ತು ಪರಶುರಾಮ ಕೊಂಡದಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿದರು. ದೊಡ್ಡ ಸಂಖ್ಯೆಯ ಭಕ್ತರು ಪುಣ್ಯ ಸ್ನಾನದಲ್ಲಿ ಪಾಲ್ಗೊಂಡಿದ್ದರು.
ಪಲ್ಲಕ್ಕಿ ಪೂಜೆ ಬಳಿಕ ಪುಣ್ಯ ಸ್ನಾನ
ಎಳ್ಳಮಾವಾಸ್ಯೆ ಸಂದರ್ಭ ಇಲ್ಲಿ ತೀರ್ಥ ಸ್ನಾನ ಮಾಡಿದರೆ ಪಾಪ ನಿವಾರಣೆಯಾಗಲಿದೆ ಎಂಬುದು ಭಕ್ತರ ನಂಬಿಕೆ. ಹಾಗಾಗಿ ಬೆಳಗಿನ ಜಾವದಲ್ಲಿಯೇ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಸರತಿಯಲ್ಲಿ ನಿಂತಿದ್ದರು. ಶ್ರೀ ರಾಮೇಶ್ವರ ದೇವರ ಪಲ್ಲಕ್ಕಿಯನ್ನು ರಾಮಕೊಂಡದ ಬಳಿ ಕೊಂಡೊಯ್ದು ಪೂಜೆ ಸಲ್ಲಿಸಲಾಯಿತು. ಆ ಬಳಿಕ ಭಕ್ತರಿಗೆ ಪುಣ್ಯ ಸ್ನಾನಕ್ಕೆ ಅವಕಾಶ ಕಲ್ಪಿಸಲಾಯಿತು. ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಭಕ್ತರು ತುಂಗಾ ನದಿಯ ದಂಡೆಗೆ ಆಗಮಿಸಿದ್ದರು.
ಕಿರು ಸೇತುವೆ ನಿರ್ಮಾಣ
ಪರಶುರಾಮ ಕೊಂಡಕ್ಕೆ ತೆರಳಲು ತುಂಗಾ ನದಿಯನ್ನು ಅಪಾಯಕಾರಿ ಸ್ಥಿತಿಯಲ್ಲಿ ದಾಟಬೇಕಿತ್ತು. ಈ ಬಾರಿ ಭಕ್ತರಿಗೆ ಸಮಸ್ಯೆ ಆಗದಿರಲೆಂದು 6.80 ಲಕ್ಷ ರೂ. ವೆಚ್ಚದಲ್ಲಿ ಕಿರು ಸೇತುವೆ ನಿರ್ಮಿಸಲಾಗಿದೆ. ಹಾಗಾಗಿ ಭಕ್ತರು ಮತ್ತು ದೇವರ ಪಲ್ಲಕ್ಕಿಯನ್ನು ಪರಶುರಾಮ ಕೊಂಡದವರೆಗೆ ಸುಲಭವಾಗಿ ತಲುಪುವಂತಾಯಿತು.
ದೇವರಿಗೆ ವಿಶೇಷ ಅಲಂಕಾರ, ಪೂಜೆ
ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ತೀರ್ಥ ಸ್ನಾನದ ಬಳಿಕ ಭಕ್ತರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಮಂಗಳವಾರದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಕ್ತಿ ದೇವತೆಗಳ ಸಮಾಗಮ, ಹರಿದು ಬಂತು ಭಕ್ತ ಸಾಗರ, ಹೇಗಿತ್ತು ವೈಭವ? | ಫೋಟೊ ನ್ಯೂಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422