SHIMOGA : ರಾಷ್ಟ್ರವ್ಯಾಪಿ ದೇಗುಲ ಸ್ವಚ್ಛತಾ ಅಭಿಯಾನದ ಹಿನ್ನೆಲೆ ನಗರದ ಹೊಳೆಹೊನ್ನೂರು ರಸ್ತೆ ರೈಲ್ವೆ ಗೇಟ್ ಪಕ್ಕದಲ್ಲಿರುವ ಅರಕೇಶ್ವರ ದೇಗುಲದಲ್ಲಿ ಶಿವಮೊಗ್ಗ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಪೊರಕೆ ಹಿಡಿದು ಶ್ರಮದಾನ ಮಾಡಿದರು.
ಸಂಕ್ರಾಂತಿಯಂದು ಸೂರ್ಯ ತನ್ನ ಪಥ ಬದಲಿಸಿಕೊಂಡು ಹೆಚ್ಚು ಬೆಳಕು ನೀಡುತ್ತಾನೆ. ಇಂತಹ ಸಂದರ್ಭ ನಮ್ಮ ವಾಸ ಸ್ಥಳದ ಸಮೀಪದ ದೇವಸ್ಥಾನದ ಸ್ವಚ್ಛತೆಗೆ ಆದ್ಯತೆ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಈ ಆಂದಲೋನಕ್ಕೆ ನಾವು ಕೈ ಜೋಡಿಸಿದ್ದೇವೆ. ರಾಜಕಾರಣ ಅಂದರೆ ಚುನಾವಣೆಗೆ ಸೀಮಿತಗೊಳ್ಳದೆ ಇಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕಿದೆ.ಬಿ.ವೈ.ರಾಘವೇಂದ್ರ, ಸಂಸದ
ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಪ್ರಮುಖರಾದ ಗಿರೀಶ್ ಪಟೇಲ್ ಸೇರಿದಂತೆ ಬಿಜೆಪಿಯ ಹಲವು ಪ್ರಮುಖರು ಈ ಸಂದರ್ಭ ಹಾಜರಿದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ