ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರು ಅಡ್ಡಗಟ್ಟಿ ಚಾಲಕನಿಗೆ ಹಲ್ಲೆ, ಜೀವ ಬೆದರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 JANUARY 2024

SHIMOGA : ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರು ಅಡ್ಡಗಟ್ಟಿ ಚಾಲಕನಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಲಾಗಿದೆ. ಈ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಶಿವಕುಮಾರ್‌ ಎಂಬುವವರು ವಿಮಾನ ನಿಲ್ದಾಣಕ್ಕೆ ತಮ್ಮ ಕಾರಿನಲ್ಲಿ ಟ್ಯಾಕ್ಸಿ ಸರ್ವಿಸ್ಸ್‌ ನೀಡುತ್ತಿದ್ದಾರೆ. ಶನಿವಾರ ಮಧ್ಯಾಹ್ನ ವಿಮಾನದಲ್ಲಿ ಬಂದ ಪ್ರಯಾಣಿಕರೊಬ್ಬರನ್ನು ಶಿವಮೊಗ್ಗಕ್ಕೆ ಡ್ರಾಪ್‌ ಮಾಡಿ, ವಿಮಾನ ನಿಲ್ದಾಣಕ್ಕೆ ಮರಳುತ್ತಿದ್ದರು. ಎನ್‌.ಟಿ.ರಸ್ತೆಯಲ್ಲಿ ತೆರಳುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು, ಕಾರನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ್ದಾರೆ. ಇದೆ ಹೊತ್ತಿಗೆ ಇನ್ನೊಂದು ಬೈಕ್‌ನಲ್ಲಿ ಬಂದ ಮತ್ತಿಬ್ಬರು ಯುವಕರು ಕಾರು ಚಾಲಕನಿಗೆ ನಿಂದಿಸಿ, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – ಅಡಿಕೆ ತುಂಬಿದ್ದ ಬೊಲೇರೊ ಪಿಕಪ್‌ ಪಲ್ಟಿ, ಮೂವರು ಸಾವು

ಸುತ್ತಮುತ್ತಲ ಜನರು ಜಗಳ ಬಿಡಿಸಿದ್ದು, ಗಾಯಗೊಂಡಿದ್ದ ಚಾಲಕ ಶಿವಕುಮಾರ್‌ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಹಲ್ಲೆ ಮತ್ತು ಜೀವ ಬೆದರಿಕೆ ಒಡ್ಡಿದ ನಾಲ್ವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment