ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 JANUARY 2024
SHIMOGA : ನಗರದ ಶಿವಪ್ಪನಾಯಕ ಸರ್ಕಲ್ ಸಮೀಪ ಯುವತಿಗೆ ಚಾಕು ಇರಿಯಲಾಗಿದೆ. ಆಕ್ರೋಶಗೊಂಡ ಸಾರ್ವಜನಿಕರು ಯುವಕನಿಗೆ ಥಳಿಸಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯ ಚೇತನ್ ಎಂಬಾತ ಮಧ್ಯಾಹ್ನ ಶಿವಪ್ಪನಾಯಕ ಸರ್ಕಲ್ ಸಮೀಪ ಯುವತಿ ಜೊತೆ ಜಗಳವಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಚಾಕು ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿ ಕೂಗಿಕೊಳ್ಳುತ್ತಿದ್ದಂತೆ ಸಾರ್ವಜನಿಕರು ನೆರವಿಗೆ ಧಾವಿಸಿದರು. ಯುವಕನನ್ನು ಹಿಡಿದು ಥಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಸರ್ಕಲ್‌ನಲ್ಲಿ ಸಂಸದನ ಪ್ರತಿಕೃತಿಗೆ ಬೆಂಕಿ, ಗಡಿಪಾರಿಗೆ ಆಗ್ರಹ
ಗಾಯಾಳು ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422