ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JANUARY 2024
SORABA : ಬಂಕಸಾಣದ ಹೊಳೆಲಿಂಗೇಶ್ವರ ರಥೋತ್ಸವಕ್ಕೆ ಸಚಿವ ಮಧು ಬಂಗಾರಪ್ಪ ರಥ ಎಳೆದು ಚಾಲನೆ ನೀಡಿದರು. ವರದಾ ಮತ್ತು ದಂಡಾವತಿ ನದಿಗಳ ಸಂಗಮ ಕ್ಷೇತ್ರದಲ್ಲಿ ರಥೋತ್ಸವ ನಡೆಯಿತು. ಇದಕ್ಕೂ ಮೊದಲು ಹೊಳೆಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು.
ದೊಡ್ಡ ಸಂಖ್ಯೆಯ ಭಕ್ತರು ಭಾಗಿ
ಶ್ರೀ ಹೊಳೆಲಿಂಗೇಶ್ವರ ದೇವರ ಜಾತ್ರೆ ಅಂಗವಾಗಿ ರಥೋತ್ಸವ ನಡೆಯಿತು. ಸುತ್ತಮುತ್ತಲ ವಿವಿಧ ಗ್ರಾಮಗಳು, ನೆರೆಯ ತಾಲೂಕು, ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ದೇವರ ದರ್ಶನ ಪಡೆದು, ರಥ ಎಳೆದರು.

ಸಮಾನ್ಯರಂತೆ ಮಿನಿಸ್ಟರ್ ಸುತ್ತಾಟ
ಬಂಕಸಾಣ ಗ್ರಾಮದ ಜಾತ್ರೆಯಲ್ಲಿ ಸಚಿವ ಮಧು ಬಂಗಾರಪ್ಪ ಜನರೊಂದಿಗೆ ಅಂಗಡಿಗಳಿಗೆ ಭೇಟಿ ನೀಡಿದರು. ತಿಂಡಿ, ತಿನಿಸು ಖರೀದಿಸಿ ಕಾರ್ಯಕರ್ತರಿಗೆ ಹಂಚಿದರು. ಜಾತ್ರೆಯಲ್ಲಿ ಭಾಗವಹಿಸಿದ್ದ ವಿವಿಧ ಕಲಾತಂಡಗಳ ಕಲಾವಿದರನ್ನು ಮಾತನಾಡಿಸಿದರು. ಜಾತ್ರೆ ಅಂಗವಾಗಿ ಶ್ರೀ ಸಂತ ಶರೀಫ ಶಿವಯೋಗಿ ನಾಟ್ಯ ಸಂಘಟಕ್ಕೆ ಭೇಟಿ ನೀಡಿ ಕಲಾವಿದರ ಮನವಿ ಆಲಿಸಿದರು. ವೈಯಕ್ತಿಕವಾಗಿ 50 ಸಾವಿರ ರೂ. ನೆರವು ನೀಡಿದರು. ಅಲ್ಲದೆ ಸರ್ಕಾರದ ವತಿಯಿಂದಲು ನೆರವು ಕೊಡಿಸುವ ಭರವಸೆ ವ್ಯಕ್ತಪಡಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಿನಿಸ್ಟರ್ vs ಸಂಸದ, ಪರಸ್ಪರ ಟೀಕೆ, ಸವಾಲು, ಕಾರಣವೇನು?
ತಹಶೀಲ್ದಾರ್ ಹುಸೇನ್ ಸರಕಾವಸ್, ಜಾತ್ರೆ ಸಮಿತಿ ಅಧ್ಯಕ್ಷ ರಾಜಪ್ಪ ಗೌಡ ಬಂಕಸಾಣ, ಧರ್ಮದರ್ಶಿ ಬಸವರಾಜ್ ಗೌಡ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






