ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JANUARY 2024
SHIMOGA : ಹಿಟ್ ಅಂಡ್ ರನ್ ಪ್ರಕರಣಗಳ ಕುರಿತು ಕಠಿಣ ಕಾನೂನು ಜಾರಿಗೆ ತಂದಿರುವುದನ್ನು ಹಿಂಪಡೆಯುವಂತೆ ಆಗ್ರಹಿಸಿ ಲಾರಿ ಚಾಲಕರು, ಮಾಲೀಕರು ಮುಷ್ಕರ ನಡೆಸುತ್ತಿದ್ದಾರೆ. ಈ ಮಧ್ಯೆ ರಸ್ತೆಗಿಳಿದಿದ್ದ ಕೆಲವು ಲಾರಿಗಳನ್ನು ಶಿವಮೊಗ್ಗ ಎಂಆರ್‌ಎಸ್ ಬಳಿ ತಡೆ ಹಿಡಿದು ಮುಷ್ಕರಕ್ಕೆ ಸಹಕರಿಸುವಂತೆ ಲಾರಿ ಚಾಲಕರು ಮನವಿ ಮಾಡಿದರು.
ಬುಧವಾರದಿಂದ ದೇಶಾದ್ಯಂತ ಲಾರಿ ಮುಷ್ಕರ ಆರಂಭವಾಗಿದೆ. ಜಿಲ್ಲೆಯಲ್ಲಿ ಬುಧವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬಹುತೇಕ ಲಾರಿಗಳು ರಸ್ತೆಗಿಳಿಯದೆ ಉಳಿದಿದ್ದವು. ಆದರೆ ಕೆಲವು ಲಾರಿ ಚಾಲಕರು ಎಂದಿನಂತೆ ಕೆಲಸ ಮುಂದುವರೆಸಿದ್ದರು.
ಎಂಆರ್‌ಎಸ್ ಬಳಿ ಲಾರಿ ತಡೆ
ಗುರುವಾರ ಬೆಳಗ್ಗೆ ಮುಷ್ಕರ ನಿರತ ಲಾರಿ ಚಾಲಕರು ರಸ್ತೆಗಿಳಿದಿದ್ದ ಲಾರಿಗಳನ್ನು ತಡೆದು ಮುಷ್ಕರಕ್ಕೆ ಬೆಂಬಲ ಸೂಚಿಸುವಂತೆ ಮನವಿ ಮಾಡಿದರು. ಎಂಆರ್‌ಎಸ್ ಬಳಿ ಲಾರಿಗಳನ್ನು ತಡೆಯಲಾಗಿದೆ. ಬಿ.ಹೆಚ್.ರಸ್ತೆಯಲ್ಲಿ ಸಂಚರಿಸುತ್ತಿದ್ದ ಲಾರಿಗಳನ್ನು ತಡೆದು ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿದೆ. ದೊಡ್ಡ ಸಂಖ್ಯೆಯ ಲಾರಿಗಳು ಸಾಲುಗಟ್ಟಿ ನಿಂತಿವೆ.


ಇದನ್ನೂ ಓದಿ – ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಮೃತದೇಹ ಪತ್ತೆ
LATEST NEWS
- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು





