ಇನ್ಮುಂದೆ ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಹೊಸ ಹೆಸರು, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 JANUARY 2024

BANGALORE : ನಗರದ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಉದ್ಯಾನವನ ಎಂದು ಹೆಸರಿಡಲು ಸರ್ಕಾರ ತೀರ್ಮಾನಿಸಿದೆ. ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ಮುಂದೆ ಅಲ್ಲಮ ಪ್ರಭು ಉದ್ಯಾನವನ

ಜ.12ರಂದು ಶಿವಮೊಗ್ಗದಲ್ಲಿ ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಹೆಸರಿಡಬೇಕು ಎಂದು ಸಚಿವ ಮಧು ಬಂಗಾರಪ್ಪ ಮನವಿ ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದರು. ಇಂದು ಸಂಪುಟ ಸಭೆಯಲ್ಲಿ ಅಲ್ಲಮ ಪ್ರಭು ಉದ್ಯಾನವನ ಎಂದು ಹೆಸರಿಡಲು ತೀರ್ಮಾನಿಸಲಾಗಿದೆ.

ಸಿಎಂ, ಡಿಸಿಎಂಗೆ ಮಿನಿಸ್ಟರ್‌ ಅಭಿನಂದನೆ

‘12ನೇ ಶತಮಾನದಲ್ಲಿ ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಇಡಬೇಕು ಎಂಬುದು ಜನತೆಯ ಒತ್ತಾಸೆಯಾಗಿತ್ತು. 46.32 ಎಕರೆ ವಿಸ್ತೀರ್ಣದ ಜೈಲು ಆವರಣದ ಮೈದಾನಕ್ಕೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವ ಮೂಲಕ ಜಿಲ್ಲೆಯ ಜನತೆಯ ದಶಕಗಳ ಕನಸನ್ನು ಕಾಂಗ್ರೆಸ್ ಸರ್ಕಾರ ನನಸು ಮಾಡಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆ’ ಎಂದು ಸಚಿವ ಮಧು ಬಂಗಾರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನುಭವ ಮಂಟಪದ ಶೂನ್ಯ ಸಿಂಹಾಸನದ ಮೊದಲ ಅಧ್ಯಕ್ಷರಾಗಿದ್ದ ಅಲ್ಲಮ ಪ್ರಭು ಅವರ ಹೆಸರನ್ನು ನಾಮಕರಣ ಮಾಡಿರುವುದು ಕೇವಲ ವೀರಶೈವ ಲಿಂಗಾಯತರು ಮಾತ್ರವಲ್ಲದೆ ಎಲ್ಲ ಜಾತಿಯವರು ಹೆಮ್ಮೆ ಪಟ್ಟಿರುತ್ತಾರೆ. ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಂಡಿರುವುದು ಸಂತೋಷ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವ ಮಧು ಬಂಗಾರಪ್ಪ ಅವರಿಗೆ ಕೃತಜ್ಞತೆ.ಆಯನೂರು ಮಂಜುನಾಥ್‌, ಮಾಜಿ ಸಂಸದ

 

Shimoga-Freedom-Park

ಶಿಕಾರಿಪುರದ ಕೈ ಮುಖಂಡರ ಹರ್ಷ

ಇನ್ನು, ಅಲ್ಲಮಪ್ರಭು ಉದ್ಯಾನವನ ಎಂದು ಹೆಸರಿಟ್ಟಿರುವುದಕ್ಕೆ ಶಿಕಾರಿಪುರದ ಕಾಂಗ್ರೆಸ್‌ ಮುಖಂಡರು ಕೂಡ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಶಿಕಾರಿಪುರ ಕಾಂಗ್ರೆಸ್‌ ಮುಖಂಡ ಎಸ್‌.ಪಿ.ನಾಗರಾಜಗೌಡ, ಜಿಲ್ಲಾ ವಕ್ತಾರ ರಮೇಶ್‌ ಶೆಟ್ಟಿ, ಕೆಪಿಸಿಸಿ ಹಿಂದುಳಿದ ವರ್ಗಗಳ ಸಂಯೋಜಕ ಜಿ.ಡಿ.ಮಂಜುನಾಥ್‌ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ – ಫ್ರೀಡಂ ಪಾರ್ಕ್‌ ಹೆಸರಿನ ವಿಚಾರ, ಮಿನಿಸ್ಟರ್‌ ಕೇಳಿದ್ದೊಂದು, MLA ಹೇಳಿದ್ದೊಂದು, ಕೊನಗೆ CM ಒಪ್ಪಿದ ಹೆಸರು ಯಾವುದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment