ಶಿವಮೊಗ್ಗ ಲೈವ್
SHIVAMOGGA LIVE NEWS | 20 JANUARY 2024 (ಈ ಸುದ್ದಿಯನ್ನು ಇನ್ನು 22 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
THIRTHAHALLI : ಮನೆಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೀರ್ಥಹಳ್ಳಿಯ ಬಾಳೆಬೈಲು ಪದವಿ ಕಾಲೇಜು ವಿದ್ಯಾರ್ಥಿನಿ ಅಧೀಕ್ಷಾ (20) ಮೃತಳು. ಬಿಳಾಲುಕೊಪ್ಪದ ಮನೆಯಲ್ಲಿ ಅಧೀಕ್ಷಾ ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜಯ ಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಮೃತದೇಹ ಪತ್ತೆ
