‘ಬಿಜೆಪಿಯಲ್ಲಿ ಮಾತ್ರ ಅವರಿಗೆ ಗುರುಬಲ, ಕಾಂಗ್ರೆಸ್‌ನಿಂದ ತಮಗೆ ಟಿಕೆಟ್‌ ಖಚಿತʼ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 JANUARY 2024

SHIMOGA : ಆಯನೂರು ಮಂಜುನಾಥ್‌ ಅವರಿಗೆ ಬಿಜೆಪಿ ಹೊರತು ಬೇರಾವ ಪಕ್ಷದಲ್ಲಿಯು ಗುರುಬಲವಿಲ್ಲ. ಆದ್ದರಿಂದ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಿಂದ ತಮಗೆ ಟಿಕೆಟ್‌ ಸಿಗಲಿದೆ ಎಂದು ಆಕಾಂಕ್ಷಿ ಎಸ್‌.ಪಿ.ದಿನೇಶ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 32 ವರ್ಷದಿಂದ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇನೆ. ಕಳೆದ ಎರಡು ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಪೈಪೋಟಿ ಒಡ್ಡಿದ್ದೇನೆ ಎಂದು ತಿಳಿಸಿದರು.

ಏನೇನೆಲ್ಲ ಹೇಳಿದರು? ಇಲ್ಲಿದೆ 5 ಪಾಯಿಂಟ್‌

POINT-132 ವರ್ಷದಿಂದ ಕಾಂಗ್ರೆಸ್‌ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಎನ್‌ಎಸ್‌ಯುಐ, ಯುವ ಕಾಂಗ್ರೆಸ್‌ ಸೇರಿದಂತೆ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಯ ಡಿ.ಹೆಚ್.ಶಂಕರಮೂರ್ತಿ ಮತ್ತು ಆಯನೂರು ಮಂಜುನಾಥ್‌ ಅವರಿಗೆ ಪ್ರಬಲ ಪೈಪೋಟಿ ಒಡ್ಡಿದ್ದೇನೆ. 2008ರ ಚುನಾವಣೆಗಿಂತಲು 2012ರ ಚುನಾವಣೆಯಲ್ಲಿ ಆರು ಸಾವಿರ ಹೆಚ್ಚುವರಿ ಮತ ಪಡೆದಿದ್ದೇನೆ.

POINT-2ನೈಋತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಚುನಾವಣೆ ಹೊತ್ತಿಗೆ 30 ವಿಧಾನಸಭೆ ಕ್ಷೇತ್ರಗಳ ಪೈಕಿ 27ರಲ್ಲಿ ಬಿಜೆಪಿ ಶಾಸಕರಿದ್ದರು. ಆಗಲು ಪ್ರಬಲ ಪೈಪೋಟಿ ನೀಡಿದ್ದೇನೆ. ಈ ಬಾರಿ 15 ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಪಕ್ಷದ ಮಾಜಿ ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು, ಮುಖಂಡರು, ಕಾರ್ಯಕರ್ತರು ತಮಗೆ ಬೆಂಬಲವಾಗಿದ್ದಾರೆ.

POINT-3ಆಯನೂರು ಮಂಜುನಾಥ್‌ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರುವ ಹೊತ್ತಿಗೆ ಅವರ ಆಪ್ತರೊಬ್ಬರು ತಮ್ಮನ್ನು ಭೇಟಿಯಾಗಿದ್ದರು. ಅವರು ಟಿಕೆಟ್‌ ಕೇಳುವುದಿಲ್ಲ. ಆದ್ದರಿಂದ ಅವರ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಬೇಡಿ ಎಂದು ಮನವಿ ಮಾಡಿದ್ದರು. ಮೂರ್ನಾಲ್ಕು ಬಾರಿ ಅವರು ತಮ್ಮನ್ನು ಭೇಟಿಯಾಗಿದ್ದರು. ಕಾಂಗ್ರೆಸ್‌ ಸೇರ್ಪಡೆಯಾದ ನಾಲ್ಕೇ ದಿನಕ್ಕೆ ಆಯನೂರು ಮಂಜುನಾಥ್‌ ಅವರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಆಗ ತಮ್ಮ ಬಳಿ ಬಂದವರನ್ನು ವಿಚಾರಿಸಿದಾಗ ರಾಜಕೀಯದಲ್ಲಿ ಇದೆಲ್ಲ ಸಹಜ ಎಂದಿದ್ದರು.

POINT-4ನೈಋತ್ಯ ಪದವೀಧರ ಕ್ಷೇತ್ರದಿಂದ ಸದ್ಯ ಆಯನೂರು ಮಂಜುನಾಥ್‌ ಮತ್ತು ತಮ್ಮ ಹೆಸರು ಅಂತಿಮಗೊಂಡಿದೆ. ಆದರೆ ಆಯನೂರು ಮಂಜುನಾಥ್‌ ಅವರಿಗೆ ಬಿಜೆಪಿ ಹೊರತು ಬೇರೆಲ್ಲೂ ಗುರುಬಲವಿಲ್ಲ. ಅವರು ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನ ಪರಿಷತ್‌ ಸದಸ್ಯರಾಗಿದ್ದೆಲ್ಲ ಬಿಜೆಪಿಯಿಂದಲೆ. ಅವರು ಬೇರೆ ಪಕ್ಷದಿಂದ ಎಂದಿಗೂ ಆಯ್ಕೆಯಾಗಿಲ್ಲ. ಆದ್ದರಿಂದ ಅವರಿಗೆ ಬೇರೆ ಪಕ್ಷದಲ್ಲಿ ಗುರುಬಲವಿಲ್ಲ.

ಇದನ್ನೂ ಓದಿ – ನಿಗಮ, ಮಂಡಳಿ ನೇಮಕಾತಿ, ಶಿವಮೊಗ್ಗದಲ್ಲಿ ಪಟ್ಟಿ ರಿಲೀಸ್‌ಗು ಮೊದಲೇ ಐವರಿಗೆ ಅಭಿನಂದನೆ

POINT-5ಪ್ರತಿ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚು ಮತದಾರರು ಇರುತ್ತಿದ್ದರು. ಆದರೆ ಈ ಬಾರಿ ಮಂಗಳೂರು ಮತ್ತು ಉಡುಪಿಯಲ್ಲಿ ಹೆಚ್ಚಿನ ಜನ ಹೆಸರು ನೋಂದಾಯಿಸಿದ್ದಾರೆ. ಇಡೀ ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವಂತೆ ಮಾನವಿ ಮಾಡುತ್ತಿದ್ದೇನೆ. ಇದಕ್ಕಾಗಿ ಅಭಿಯಾನ ಕೈಗೊಂಡಿದ್ದೇನೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 20, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment