ಹೆಂಡತಿ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಂದ ಗಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 JANUARY 2024

BYKODU : ಕೌಟುಂಬಿಕ ಕಲಹಕ್ಕೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಪತಿಯೇ ಪತ್ನಿಯ ಹತ್ಯೆಗೈದಿದ್ದಾನೆ. ಸಾಗರ ತಾಲೂಕು ಕರೂರು ಹೋಬಳಿಯ ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವಿಗೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ನೀಲಾವತಿ (29) ಮೃತ ದುರ್ದೈವಿ. ಇಂದು ಬೆಳಗ್ಗೆ ಪತಿ ಲೋಕೇಶ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ನೀಲಾವತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ನೀಲಾವತಿ ಕೊನೆಯುಸಿರೆಳೆದಿದ್ದಾರೆ.

ತವರು ಮನೆಗೆ ಹೋಗಿದ್ದ ಮಹಿಳೆ

ಕೌಟುಂಬಿಕ ಕಲಹದಿಂದ ಬೇಸತ್ತು ನೀಲಾವತಿ ತನ್ನ ಮೂರು ಹೆಣ್ಣು ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದರು. ಶನಿವಾರ ಬೆಳಗ್ಗೆ ಬಟ್ಟೆ ಕೊಂಡೊಯ್ಯಲು ಗಂಡನ ಮನೆಗೆ ವಾಪಾಸಾಗಿದ್ದರು. ಆ ಸಂದರ್ಭ ಲೋಕೇಶ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ರಕ್ತದ ಮಡುವಿನಲ್ಲಿದ್ದ ನೀಲಾವತಿ

ರಕ್ತದ ಮಡುವಿನಲ್ಲಿದ್ದ ನೀಲಾವತಿ ಅವರನ್ನು ಅಕ್ಕ-ಪಕ್ಕದ ಮನೆಯವರು ತುಮರಿಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಸ್ಥಳೀಯರು ತುರ್ತು ಲಾಂಚ್ ವ್ಯವಸ್ಥೆ ಮಾಡಿ 108 ಆಂಬುಲೆನ್ಸ್‌ ಮೂಲಕ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಗೃಹಿಣಿಗೆ ಅಪರಿಚಿತನಿಂದ ಮೆಸೇಜ್‌, ಫೋನ್‌, ಕೊನೆಗೆ ಕಾದಿತ್ತು ಶಾಕ್‌, ನೀವೂ ಆಗಬಹುದು ಮುಂದಿನ ಟಾರ್ಗೆಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 20, 2024

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

Leave a Comment