ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 JANUARY 2024
SHIMOGA : ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನೆಲೆ ಸಿಹಿ ಹಂಚುವ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದ್ದು ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.
ಶಿವಪ್ಪನಾಯಕ ಪ್ರತಿಮೆ ಸಮೀಪ ಹಿಂದೂ ಸಂಘಟನೆಗಳ ಕಾರ್ಯಕರ್ತರು ಲಡ್ಡು ಹಂಚುತ್ತಿದ್ದರು. ಇದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ಹಾಗಾಗಿ ಜನರು ಮುಂದೆ ಸಾಗುವಂತೆ ಪೊಲೀಸರು ತಿಳಿಸುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಬುರ್ಖಾ ಧರಿಸಿದ್ದ ಮಹಿಳೆಗೂ ಮುಂದೆ ಸಾಗುವಂತೆ ಸೂಚಿಸಿದರು. ಆಗ ಆಕ್ರೋಶಗೊಂಡ ಮಹಿಳೆ ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸಿದ್ದಾರೆ. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಮಹಿಳೆ ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದ್ದಾರೆ. ಕೂಡಲೆ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದರು.
ಇದನ್ನೂ ಓದಿ – ಪೆನ್ಸಿಲ್ ಲೆಡ್ನಲ್ಲಿ 1 ಸೆಂಟಿ ಮೀಟರ್ನ ರಾಮ ಮಂದಿರ ನಿರ್ಮಿಸಿದ ಭದ್ರಾವತಿ ಯುವಕ, ಹೇಗಿದೆ? ನಿರ್ಮಿಸಿದ್ದು ಹೇಗೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






