ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 JANUARY 2024
HOLEHONNURU : ವಿದ್ಯುತ್ ಕಂಬದಲ್ಲಿ ಲೈನ್ ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾರೆ. ಅರಹತೊಳಲು ಕೈಮರದ ಸಮೀಪ ಹನುಮಂತಾಪುರ ರಸ್ತೆಯ ಪೆಟ್ರೋಲ್ ಬಂಕ್ ಮುಂಭಾಗ ಘಟನೆ ಸಂಭವಿಸಿದೆ.
ಚಂದ್ರಶೇಖರ್ ಲಮಾಣಿ (27) ಮೃತರು. ಬ್ಯಾಡಗಿ ತಾಲೂಕು ಸಿಡೆನೂರು ಗ್ರಾಮದ ಚಂದ್ರಶೇಖರ್, ಜ್ಯೂನಿಯರ್ ಲೈನ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಘಟನೆ ಸಂಭವಿಸಿದ್ದು ಹೇಗೆ?
ತೋಟಗಳ ಐಪಿ ಸೆಟ್ ಲೈನ್ ದುರಸ್ಥಿ ವೇಳೆ ಘಟನೆ ಸಂಭವಿಸಿದೆ. ಕಂಬದ ಮೇಲೆ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ಪ್ರವಹಿಸಿ ಚಂದ್ರಶೇಖರ್ ಲಮಾಣಿ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಮೃತನ ಸ್ವಗ್ರಾಮಕ್ಕೆ ಮೃತದೇಹ ರವಾನಿಸಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಆ್ಯಪ್ ಡೌನ್‌ಲೋಡ್ ಮಾಡುತ್ತಿದ್ದಂತೆ ರೈತನ ವಾಟ್ಸಪ್‌ಗೆ ಬಂತು ಫೋನ್, ಮುಂದೆ ಕಾದಿತ್ತು ಸಂಕಷ್ಟ
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















