ಶಿವಮೊಗ್ಗಕ್ಕೆ ಉಸ್ತುವಾರಿ ಸಚಿವ, ಎರಡು ದಿನ ವಿವಿಧ ಕಾರ್ಯಕ್ರಮದಲ್ಲಿ ಭಾಗಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 25 JANUARY 2024

SHIMOGA : ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜ.25 ಮತ್ತು 26ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಜ.25ರಂದು ಸಂಜೆ 5 ಗಂಟೆಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ನಗರದ ಬೆಕ್ಕಿನ ಕಲ್ಮಠದಲ್ಲಿ ಶ್ರೀ ಗುರುಬಸವ ಮಹಾ ಶಿವಯೋಗಿಗಳ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6.30ಕ್ಕೆ ರಾಗಿಗುಡ್ಡದಲ್ಲಿ ನಡೆಯುತ್ತಿರುವ ರಿಪಬ್ಲಿಕ್‌ ಡೇ ಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 7ಕ್ಕೆ ಶಿವಮೊಗ್ಗದಿಂದ ಸೊರಬಕ್ಕೆ ತೆರಳಲಿದ್ದು ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ತೈಪೂಸಂ, ಹಾಲಿನ ಕೊಡ ಹೊತ್ತು ಹರಕೆ ತೀರಿಸಿದ ಮಹಿಳೆಯರು, ಕಾವಡಿ ಹೊತ್ತು ದೇವರಿಗೆ ನಮಿಸಿದ ಭಕ್ತರು

ಜ. 26ರಂದು ಬೆಳಗ್ಗೆ 8 ಗಂಟೆಗೆ ಶಿವಮೊಗ್ಗ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 8.30ಕ್ಕೆ ಡಿಎಆರ್‌ ಮೈದಾನದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ರಸ್ತೆ ಮೂಲಕ ಮಂಗಳೂರಿಗೆ ತೆರಳಲಿದ್ದಾರೆ. ಅಲ್ಲಿಂದ ಮುಂಬೈಗೆ ಪ್ರಯಾಣ ಮಾಡಲಿದ್ದಾರೆ.

Leave a Comment