SHIMOGA : ನಿಗಮ ಮಂಡಳಿಗೆ ತಮ್ಮ ನೇಮಕ ಕುರಿತು ಸುದ್ದಿ ಹಬ್ಬಿರುವ ಕುರಿತು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮೊದಲ ಬಾರಿ ಬಹಿರಂಗ ಹೇಳಿಕೆ ನೀಡಿದ್ದಾರೆ.
ಮಂಜುನಾಥ ಗೌಡ ಹೇಳಿದ್ದೇನು?
‘ನಿಗಮ ಮಂಡಳಿಗೆ ನೇಮಕಾತಿ ಸಂಬಂಧ ತಾವು ಅರ್ಜಿ ಸಲ್ಲಿಸಿಲ್ಲ. ಅಪೇಕ್ಷಿತನು ಅಲ್ಲ. ಆದರೆ ನಿಗಮ ಮಂಡಳಿಗೆ ತಮ್ಮ ನೇಮಕ ಮಾಡಿದರೆ ಬೇಡ ಅನ್ನುವುದಿಲ್ಲ. ಒಂದು ವೇಳೆ ಕೊಡದಿದ್ದರು ಬೇಸರವಿಲ್ಲ. ಇದೆಲ್ಲವು ಮುಖ್ಯಮಂತ್ರಿಮತ್ತು ಉಪ ಮುಖ್ಯಮಂತ್ರಿ ಅವರ ನಿರ್ಧಾರಕ್ಕೆ ಬಿಟ್ಟದ್ದುʼ ಎಂದು ಮಂಜುನಾಥ ಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನೇಮಕ ಕುರಿತು ಹಬ್ಬಿತ್ತು ಸುದ್ದಿ
ಈಚೆಗೆ ನಿಗಮ ಮಂಡಳಿಗೆ ಹಲವರ ನೇಮಕ ಮಾಡಲಾಗಿದೆ ಎಂಬ ಸುದ್ದಿ ಹಬ್ಬಿತ್ತು. ಆರ್.ಎಂ.ಮಂಜುನಾಥಗೌಡ ಅವರಿಗೆ ಪ್ರಮುಖ ಸಂಸ್ಥೆಯೊಂದಕ್ಕೆ ನೇಮಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಹುಟ್ಟಿಸಿತ್ತು. ಫೇಸ್ಬುಕ್, ವಾಟ್ಸಪ್ ಮೂಲಕ ಮಂಜುನಾಥಗೌಡ ಅವರಿಗೆ ಹಲವರು ಅಭಿನಂದನೆಯನ್ನು ಸಲ್ಲಿಸಿದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ