SHIVAMOGGA LIVE NEWS | 27 JANUARY 2024 (ಈ ಸುದ್ದಿಯನ್ನು ಇನ್ನು 37 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
SHIMOGA : ಸವಳಂಗ ರಸ್ತೆಯಲ್ಲಿ ಉಷಾ ನರ್ಸಿಂಗ್ ಹೋಂ ಸಮೀಪ ರೈಲ್ವೆ ಮೇಲ್ಸೇತುವೆ ಮೇಲೆ ಸಾರ್ವಜನಿಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಶುಕ್ರವಾರ ಸಂಸದ ಬಿ.ವೈ.ರಾಘವೇಂದ್ರ ಅವರು ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಿರುವುದಾಗಿ ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಂಡ ರೈಲ್ವೆ ಮೇಲ್ಸೇತುವೆ ಕಾಮಗಾರಿ ಅಂತಿಮವಾಗಿ ಪೂರ್ಣಗೊಂಡಿದೆ. ಸದ್ಯಕ್ಕೆ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮುಂದಿನ ವಾರದಿಂದ ಭಾರೀ ವಾಹನಗಳು ಸಂಚರಿಸಬಹುದು ಎಂದು ಸಂಸದ ರಾಘವೇಂದ್ರ ಮಾಹಿತಿ ನೀಡಿದರು.
ಇದನ್ನೂ ಓದಿ – ವಿದ್ಯಾನಗರ ಮೇಲ್ಸೇತುವೆಗೆ ಬಿ.ಹೆಚ್.ರಸ್ತೆಯಲ್ಲಿ ಡಿವೈಡರ್ ರೆಡಿ, ಸವಳಂಗ ರಸ್ತೆ ಫ್ಲೈ ಓವರ್ ಪರಿಶೀಲಿಸಿದ ಎಂಪಿ
ಶಾಸಕ ಎಸ್.ಎನ್.ಚೆನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಸರ್ಜಿ ಫೌಂಡೇಷನ್ ವ್ಯವಸ್ಥಾಪಕ ಧನಂಜಯ್ ಸರ್ಜಿ. ಸಂತೋಷ್ ಬಳ್ಳಿಕೆರೆ ಇದ್ದರು.
