ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 JANUARY 2024
SHIMOGA : ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಿ ರಾಜ್ಯದಲ್ಲಿ ಶೋಷಿತರ ಆತ್ಮವಿಶ್ವಾಸವನ್ನು ಹೆಚ್ಚಿಸಿದ ಕೀರ್ತಿ ಪ್ರೊ.ಬಿ ಕೃಷ್ಣಪ್ಪ ಅವರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಇಲ್ಲಿನ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕದ ದಲಿತ ಚಳುವಳಿಗೆ 50ರ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂಘಟನೆ ಮೂಲಕ ಸಾಮಾಜಿಕ ಕಳಕಳಿ ಹಾಗೂ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೋರಾಟ ನಡೆಸಿದ ಮಹಾನ್ ಚೇತನ ಪ್ರೊ. ಬಿ.ಕೃಷ್ಣಪ್ಪ. ಅವರ ವಿಚಾರಧಾರೆಯನ್ನು ಎಲ್ಲರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಪಕ್ಷದ ಮುಖಂಡ ಎಂ.ಶ್ರೀಕಾಂತ್, ವಕೀಲ ಕೆ.ಪಿ.ಶ್ರೀಪಾಲ್, ಡಿಎಸ್‌ಎಸ್ ನ ರಾಜ್ಯ ಖಜಾಂಚಿ ಬಿ.ಎ ಕಾಟ್ಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್, ಜಿಲ್ಲಾ ಸಂಚಾಲಕ ಎಂ.ಏಳು ಕೋಟಿ, ನಿವೃತ್ತ ಪ್ರಾಚಾರ್ಯ ಶಿವಬಸಪ್ಪ, ಪ್ರಧ್ಯಾಪಕರಾದ ಬಿ. ಎಲ್.ರಾಜು, ಕುಂಸಿ ಉಮೇಶ್, ಮೇಟಿ ಮಲ್ಲಿಕಾರ್ಜುನ್ ಇದ್ದರು.
ಇದನ್ನೂ ಓದಿ – ಸವಳಂಗ ರಸ್ತೆ ಸೇತುವೆ, ಕಾಮಗಾರಿ ಬಾಕಿ ಇರುವಾಗಲೆ ವಾಹನ ಸಂಚಾರ ಶುರು, ಅಕ್ಕಪಕ್ಕದ ಬಡಾವಣೆ ವಾಸಿಗಳ ನಿಟ್ಟುಸಿರು
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





