ಶಿವಮೊಗ್ಗದಿಂದ KSRTC ಬಸ್‌ ಹತ್ತಿದ ಮಹಿಳೆ, ನಡು ದಾರಿಯಲ್ಲಿ ಕಾದಿತ್ತು ಶಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 FEBRUARY 2024

SHIMOGA : ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತರೀಕೆರೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ನಾಪತ್ತೆಯಾಗಿದೆ. ತರೀಕೆರೆ ತಾಲೂಕಿನ ಜಯಮ್ಮ ಅವರ ಚಿನ್ನದ ಸರ ಕಳ್ಳತನವಾಗಿದೆ.  ಸಂಬಂಧಿಯೊಬ್ಬರು ಅಪಘಾತಕ್ಕೀಡಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ವಿಚಾರಿಸಿ ಜಯಮ್ಮ, ಶಿವಮೊಗ್ಗದಿಂದ ತರೀಕೆರೆಗೆ ಮರಳುತ್ತಿದ್ದರು.

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತೆರಳುವಾಗ ಶಿವಮೊಗ್ಗ – ಭದ್ರಾವತಿ ಮಾರ್ಗ ಮಧ್ಯೆ ಕೊರಳಲ್ಲಿದ್ದ 2 ಲಕ್ಷ ರೂ. ಮೌಲ್ಯದ ಬಂಗಾರದ ಸರ ನಾಪತ್ತೆ ಆಗಿರುವುದು ಗೊತ್ತಾಗಿದೆ. ಸೀಟಿನ ಅಡಿ ಬಿದ್ದಿರಬಹುದು ಎಂದು ಜಯಮ್ಮ ಬಸ್ಸಿನಲ್ಲಿ ಹುಡಕಿದ್ದಾರೆ. ಮನೆಗೆ ಹೋಗಿ ತಾವು ಧರಿಸಿದ್ದ ಬಟ್ಟೆ, ಕೈಲಿದ್ದ ಬ್ಯಾಗ್‌ ಕೂಡ ಪರಿಶೀಲಿಸಿದ್ದಾರೆ. ಬಂಗಾರದ ಸರ ಪತ್ತೆಯಾಗದ ಹಿನ್ನೆಲೆ ದೂರು ನೀಡಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ತಮ್ಮ ಬಂಗಾರದ ಸರ ಕಳ್ಳತನ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಮೊಬೈಲ್‌ನಲ್ಲಿ ಮಾತನಾಡುತ್ತ ಬಸ್‌ ಓಡಿಸಿದ ಚಾಲಕ, ವಿಡಿಯೋ ತೆಗೆದು ಪೊಲೀಸರಿಗೆ ಕಳುಹಿಸಿದ ಪ್ರಯಾಣಿಕ, ಮುಂದೇನಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 5, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment