ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 FEBRUARY 2024
SHIMOGA : ಹೆಸರಿನ ಇನಿಷಿಯಲ್ ಬದಲಾವಣೆಗೆ ಲಂಚ ಪಡೆದ ಆರೋಪದ ಹಿನ್ನೆಲೆ ಮಹಾನಗರ ಪಾಲಿಕೆ ಜನನ ಮರಣ ವಿಭಾಗದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಥಮ ದರ್ಜೆ ಸಾಹಾಯಕ ನಾಗರಾಜ್ ಎಂಬುವವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ವಿಡಿಯೋ ಸಾಕ್ಷಿ ನೀಡಿದ್ದ ವ್ಯಕ್ತಿ
ವ್ಯಕ್ತಿಯೊಬ್ಬರು ತಮ್ಮ ಸಂಬಂಧಿಯ ಮಕ್ಕಳ ಹೆಸರಿನ ಇನಿಷಿಯಲ್ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಒಂದು ಸಾವಿರ ರೂ. ಹಣ ಪಡೆಯಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ವಿಡಿಯೋವನ್ನು ಗಿರೀಶ್ ಅವರು ಲೋಕಾಯುಕ್ತಕ್ಕೆ ಒದಗಿಸಿದ್ದರು.
ಇವತ್ತು ಮಹಾನಗರ ಪಾಲಿಕೆಯ ಜನನ ಮರಣ ವಿಭಾಗದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿವೈಎಸ್ಪಿ ಉಮೇಶ್ ಈಶ್ವರ ನಾಯಕ್, ಇನ್ಸ್ಪೆಕ್ಟರ್ ಸುರೇಶ್ ನೇತೃತ್ವದಲ್ಲಿ ದಾಳಿ ನಡೆಸಿ, ವಿಚಾರಣೆ ಮಾಡಲಾಗುತ್ತಿದೆ.
ಇದನ್ನೂ ಓದಿ – ಡಿಸಿ ಕಚೇರಿಗೆ ಗೋವುಗಳನ್ನು ತಂದು ಹೋರಾಟ, ‘ಸರ್ಕಾರಕ್ಕೆ ರೈತರು, ಗೋವುಗಳ ಶಾಪ ಶತಸಿದ್ಧ’
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422