ಖಾಸಗಿ ಕಾಲೇಜು ಕಂಪ್ಯೂಟರ್‌ ಆಪರೇಟರ್‌ಗೆ ಚಾಕು ಇರಿತ, ಕಾರಣವೇನು? ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 FEBRUARY 2024

SHIKARIPURA : ಅಡ್ಡಾದಿಡ್ಡಿ ಬೈಕ್‌ ಚಲಾಯಿಸುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಖಾಸಗಿ ಕಾಲೇಜು ಕಂಪ್ಯೂಟರ್‌ ಆಪರೇಟರ್‌ಗೆ ಚಾಕು ಇರಿಯಲಾಗಿದೆ. ಶಿಕಾರಿಪುರದ ದೊಡ್ಡಪೇಟೆ ಮುಖ್ಯರಸ್ತೆಯ ವಿಠ್ಠಲ ದೇಗುಲದ ಬಳಿ ಮಂಗಳವಾರ ಘಟನೆ ಸಂಭವಿಸಿದೆ.

ಸುಶೀಲ್‌ (23) ಎಂಬುವವರಿಗೆ ಚಾಕು ಇರಿಯಲಾಗಿದೆ. ಗಾಯಾಳುವನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಘಟನೆ ಸಂಭವಿಸಿದ್ದು ಹೇಗೆ?

ಇನ್ನು, ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ‘ದ್ವಿಚಕ್ರ ವಾಹನವನ್ನು ಅಡ್ಡಾದಿಡ್ಡ ಚಲಾಯಿಸುತ್ತಿದ್ದ ಯುವಕನಿಗೆ ಸರಿಯಾಗಿ ಗಾಡಿ ಓಡಿಸುವಂತೆ ಸುಶೀಲ್‌ ತಿಳಿಸಿದ್ದಾರೆ. ಕುಪಿತಗೊಂಡ ಯುವಕ ನಾಲ್ವರು ಸ್ನೇಹಿತರನ್ನು ಕರೆಯಿಸಿಕೊಂಡಿದ್ದ. ಈ ವೇಳೆ ಸುಶೀಲ್‌ ಅವರಿಗೆ ಚಾಕು ಇರಿಯಲಾಗಿದೆ. ಘಟನೆ ಸಂಬಂಧ ತನಿಕೆಗೆ ಮೂರು ತಂಡ ರಚಿಸಲಾಗಿದೆ. ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.ʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ – ಭದ್ರಾವತಿಯಲ್ಲಿ ಫಳಫಳ ಹೊಳೆಯಿತು ಹಿತ್ತಾಳೆ ಲೋಟ, ನಂಬಿ ಚಿನ್ನದ ತಾಳಿ ಕೊಟ್ಟ ಮಹಿಳೆಗೆ ಕಾದಿತ್ತು ದೊಡ್ಡ ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment