ಹಣಗೆರೆ ರಸ್ತೆಯಲ್ಲಿ ಚಿರತೆ ಮೃತದೇಹ ಪತ್ತೆ, ಅಪಘಾತಕ್ಕೆ ಬಲಿ ಶಂಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 FEBRUARY 2024

SHIMOGA : ಹಣಗೆರೆ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಎರಡು ವರ್ಷದ ಗಂಡು ಚಿರತೆ ಮೃತಪಟ್ಟಿದೆ. ಹಣಗೆರೆ ವನ್ಯಜೀವಿ ವಲಯ ವ್ಯಾಪ್ತಿಯ ಕಲ್ಲುಕುರ್ಚಿ ಗ್ರಾಮದ ಬಳಿ ಮಂಗಳವಾರ ಘಟನೆ ಸಂಭವಿಸಿದೆ.

ರಸ್ತೆಯಲ್ಲಿ ರಕ್ತದ ಕಲೆಗಳು ಹಾಗೂ ಪಕ್ಕದಲ್ಲಿ ಬಿದ್ದ ಚಿರತೆಯನ್ನು ಕಂಡು ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದರು. ವನ್ಯಜೀವಿ ವಿಭಾಗದ ಡಿಸಿಎಫ್‌ ಪ್ರಸನ್ನ ಪಟೆಗಾರ್ ನೇತೃತ್ವದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಸಿರಿಗೆರೆ ವಲಯ ಅರಣ್ಯಾಧಿಕಾರಿ ಜೆ.ವಿಜಯಕುಮಾ‌ರ್, ಅರಣ್ಯ ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ – ಫೈನಾನ್ಸ್‌ ಸಂಸ್ಥೆ ಆಡಿಟ್‌ ವೇಳೆ ಲಕ್ಷ ಲಕ್ಷ ಹಣದ ವ್ಯತ್ಯಾಸ ಪತ್ತೆ, ಪರಿಶೀಲಿಸಿದ ಮ್ಯಾನೇಜರ್‌ಗೆ ಕಾದಿತ್ತು ಶಾಕ್‌, ದೂರು ದಾಖಲು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 7, 2024

Leave a Comment