ಮತ್ತೆ ಅಪೆಕ್ಸ್‌ ಬ್ಯಾಂಕ್‌ಗೆ ಆರ್‌.ಎಂ.ಮಂಜುನಾಥಗೌಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 FEBRUARY 2024

SHIMOGA : ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆ‌ರ್.ಎಂ.ಮಂಜುನಾಥ ಗೌಡ ಅವರನ್ನು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ನಾಮನಿರ್ದೇಶನ ಮಾಡಿಕೊಳ್ಳಲು ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಬಸವಾನಿ ವಿಜಯದೇವ್ ಈ ಹಿಂದೆ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ನಾಮನಿರ್ದೇಶನಗೊಂಡಿದ್ದರು. ಅವರು ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ಖಾಲಿ ಉಳಿದಿತ್ತು. ಮಂಜುನಾಥ ಗೌಡ ಅವರ ನಿರ್ದೇಶಕ ಸ್ಥಾನ ಐದು ವರ್ಷಗಳ ಅವಧಿಗೆ ಇರುತ್ತದೆ. ಈ ಹಿಂದೆ ಅವರು ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರಾಗಿದ್ದರು. ಈಗ ನಿರ್ದೇಶಕರಾಗಿ ನಾಮ ನಿರ್ದೇಶನಗೊಂಡಿದ್ದಾರೆ.

ಇದನ್ನೂ ಓದಿ – ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಬಳಿ ಡಿವೈಡರ್‌ ತೆರವಿಗೆ ಮಾಜಿ ಕಾರ್ಪೊರೇಟರ್‌ಗಳ ಆಗ್ರಹ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment