ಶಿಕಾರಿಪುರ ಇರಿತ ಪ್ರಕರಣ, ಅಪ್ರಾಪ್ತ ಸೇರಿ ಮೂವರು ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 FEBRUARY 2024

SHIKARIPURA : ವೀಲಿಂಗ್‌ ಮಾಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಶಿಕಾರಿಪುರದಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಲಾಗಿದೆ.

ತನಿಖೆ ನಡೆಸಿದ ಪೊಲೀಸರು ಮುಬಾರಕ್‌ ಮತ್ತು ಜೀಶಾನ್‌ ಎಂಬುವವರನ್ನು ಬಂಧಿಸಿದ್ದಾರೆ. ವೀಲಿಂಗ್‌ ಮಾಡದಂತೆ ಸುಶೀಲ್‌ ಅವರು ಯುವಕನಿಗೆ ಬದ್ಧಿವಾದ ಹೇಳಿದ್ದರು. ಬಳಿಕ ಆ ಯುವಕ ಸೇರಿದ ನಾಲ್ವರು ಸುಶೀಲ್‌ ಮೇಲೆ ದಾಳಿ ಮಾಡಿ ಚಾಕು ಇರಿದಿದ್ದರು. ಗಂಭೀರ ಗಾಯಗೊಂಡಿದ್ದ ಸುಶೀಲ್‌ಗೆ ಶಿಕಾರಿಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಟ್ರೋ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ಪೊಲೀಸ್‌ ಠಾಣೆ ಮುಂಭಾಗ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

ಘಟನೆ ಖಂಡಿಸಿ ಮತ್ತು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸಂಸದ ಬಿ.ವೈ.ರಾಘವೇಂದ್ರ ಶಿಕಾರಿಪುರ ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment