ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 FEBRUARY 2024
SHIMOGA : ಕುಟುಂಬದವರು ಮಲಗಿದ್ದಾಗ ಕಿಟಕಿಯಿಂದ ಕೈ ಹಾಕಿ ಮನೆಯ ಬಾಗಿಲು ತೆಗೆದ ಕಳ್ಳರು ನಗದು, ವಾಚ್, ಜರ್ಕಿನ್, ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ರಾಯಲ್ ಎನ್ಫೀಲ್ಡ್ ಬೈಕ್ ಕದ್ದೊಯ್ದಿದ್ದಾರೆ. ಶಿವಮೊಗ್ಗ ನಗರದ ಅಶೋಕ ನಗರದಲ್ಲಿ ಘಟನೆ ಸಂಭವಿಸಿದೆ.
ಹೇಗಾಯ್ತು ಕಳ್ಳತನ?
ಅಶೋಕ ನಗರದ ಶಿಕ್ಷಕ ಕೊಟ್ರಪ್ಪ ಎಂಬುವವರ ಮನೆಯಲ್ಲಿ ರಾತ್ರಿ ಎಲ್ಲರು ಊಟ ಮುಗಿಸಿ 11 ಗಂಟೆಗೆ ಮಲಗಿದ್ದರು. ರಾತ್ರಿ ಒಳಗೆ ನುಗ್ಗಿರುವ ಕಳ್ಳರು ಕೊಟ್ರಪ್ಪ ಅವರ ಕೊಠಡಿಯಲ್ಲಿದ್ದ ಬೀರುವಿನಿಂದ 43,800 ರೂ. ನಗದು, ಮಗನ ಬೆಡ್ ರೂಂನಲ್ಲಿರುವ ಬೀರುವಿನಿಂದ 4 ವಾಚ್, 2 ಜರ್ಕಿನ್, ಶೋಕೇಸ್ನಲ್ಲಿದ್ದ 3 ವಾಚ್, ರಾಯಲ್ ಎನ್ಫಿಲ್ಡ್ ಬೈಕ್ನ ಕೀ ಕದ್ದೊಯ್ದಿದ್ದಾರೆ. ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ರಾಯಲ್ ಎನ್ಫೀಲ್ಡ್ ಬೈಕನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.
ಬೆಳ್ಳಂಬೆಳಗ್ಗೆ ಪಕ್ಕದ ಮನೆಯಿಂದ ಫೋನ್
ಪಕ್ಕದ ಮನೆಯಲ್ಲಿರುವ ಸಹೋದರ ಬೆಳಗ್ಗೆ ರೈಲಿಗೆ ತೆರಳಲು ಮನೆಯಿಂದ ಹೊರ ಬಂದಾಗ ಕೊಟ್ರಪ್ಪ ಅವರ ಮನೆಯ ಗೇಟ್ ತೆಗೆದಿತ್ತು. ಕಾಂಪೌಂಡ್ ಒಳಗಿರುವ ಬೈಕ್ ನಾಪತ್ತೆಯಾಗಿತ್ತು. ಕೂಡಲೆ ಕಟ್ರಪ್ಪ ಅವರಿಗೆ ಕರೆ ಮಾಡಿದ್ದರು. ಕೊಟ್ರಪ್ಪ ಅವರ ಮನೆಯ ಮುಂಬಾಗಿಲು ಹೊರಗಿನಿಂದ ಚಿಲಕ ಹಾಕಲಾಗಿತ್ತು. ಹಾಗಾಗಿ ಹಿಂಬದಿ ಬಾಗಿಲಿನಿಂದ ಹೊರ ಬಂದು ನೋಡಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ.
ಕಳ್ಳರು ಕಿಟಕಿಯಿಂದ ಒಳಗೆ ಕೈ ಹಾಕಿ ಬಾಗಿಲಿನ ಚಿಲಕ ತೆಗೆದು ಕಳ್ಳತನ ಮಾಡಿದ್ದಾರೆ ಎಂದು ಕೊಟ್ರಪ್ಪ ಆರೋಪಿಸಿ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ, ಅರ್ಜಿ ಸಲ್ಲಿಸಿದ ಶಿವಮೊಗ್ಗದ ಯುವಕರಿಗೆ ಕಾದಿತ್ತು ದೊಡ್ಡ ಆಘಾತ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು





