ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 FEBRUARY 2024
SHIMOGA : ಆಜ್ ಕಾ ಇಂಕ್ವಿಲಾಬ್ ಉರ್ದು ಪತ್ರಿಕೆ ಸಂಪಾದಕ ಮುದಸ್ಸಿರ್ ಅಹಮದ್ ಅವರಿಗೆ ಪ್ರತಿಷ್ಠಿತ ಹಜರತ್ ಟಿಪ್ಪು ಸುಲ್ತಾನ್ ಶಹೀದ್ ಪ್ರಶಸ್ತಿ ಲಭಿಸಿದೆ.
ಕರ್ನಾಟಕ ಮುಸ್ಲಿಂ ಮುತ್ತಹಿದಾ ತೆಹ್ರೀಕ್, ಎಂಇಜಿ ನ್ಯೂಸ್ ಗ್ರೂಪ್ ಮತ್ತು ಫೀಡ್ ಫಾರ್ಮಾಸ್ಯುಟಿಕಲ್ಸ್ ವತಿಯಿಂದ ರಾಜ್ಯಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಲಾಯಿತು. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಶಿವಮೊಗ್ಗದ ಪತ್ರಕರ್ತ ಮುದಸ್ಸಿರ್ ಅಹಮದ್ ಅವರಿಗೆ ಪ್ರಶಸ್ತಿ ನೀಡಲಾಗಿದೆ.
ಮುಖ್ಯಮಂತ್ರಿ ರವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಕೃಷ್ಣಪ್ಪ, ಎಂಇಜಿ ಟಿವಿ ಅಧ್ಯಕ್ಷ ಮುಕ್ತಾರ್ ಅಹ್ಮದ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ಆಸ್ಪತ್ರೆ ಅಥವಾ ವೈದ್ಯರ ವಿರುದ್ಧ ಕೇಸ್ ದಾಖಲಿಸುವ ಎಚ್ಚರಿಕೆ | ಪರಿಹಾರ ನಿಗದಿಗೆ ಸಭೆ | ತೂಕದ ಯಂತ್ರ ಹರಾಜು
LATEST NEWS
- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

About The Editor
ನಿತಿನ್ ಆರ್.ಕೈದೊಟ್ಲು
















